Isaiah · chapter 34 · verse 5
Isaiah 34:5 in Kannada
ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
Nanna khadgavu paralokadalli rosha paanamaaduvadu; igo, adu edo mina mattu naanu shapisida janara mele nyaaya teerisuvadakkaagi kelage ilidu baruvadu.
Isaiah 34:5 in English
- King James Version (KJV)
- For my sword shall be bathed in heaven: behold, it shall come down upon Idumea, and upon the people of my curse, to judgment.
- World English Bible (WEB)
- For my sword has drunk its fill in the sky. Behold, it will come down on Edom, and on the people of my curse, for judgment.
- American Standard Version (ASV)
- For my sword hath drunk its fill in heaven: behold, it shall come down upon Edom, and upon the people of my curse, to judgment.
- Bible in Basic English (BBE)
- For my sword in heaven is full of wrath: see, it is coming down on Edom, in punishment on the people of my curse.
- Darby Translation (DBY)
- For my sword is bathed in the heavens; behold, it shall come down upon Edom, and upon the people of my ban, to judgment.
- Webster's Bible (WBS)
- For my sword shall be bathed in heaven: behold, it shall come down upon Edom, and upon the people of my curse, to judgment.
- Young's Literal Translation (YLT)
- For soaked in the heavens was My sword, Lo, on Edom it cometh down, On the people of My curse for judgment.
Read in context
- 3ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು.
- 4ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.
- 5ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
- 6ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
- 7ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು--
Cross references
- Jeremiah 46:10 ಯೆರೆಮೀಯ 46:10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
- Isaiah 63:1 ಯೆಶಾಯ 63:1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
- Malachi 1:4 ಮಲಾಕಿಯ 1:4ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.
- Amos 1:11–12 ಆಮೋಸ 1:11–12ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು. ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
- Jeremiah 49:7–22 ಯೆರೆಮೀಯ 49:7–22ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ? ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ. ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ? ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು. ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ. ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ. ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ. ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ. ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು. ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ. ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು. ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು. ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
- Ezekiel 25:12–14 ಯೆಹೆಜ್ಕೇಲನು 25:12–14ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು. ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 47:6 ಯೆರೆಮೀಯ 47:6ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
- Zephaniah 2:12 ಚೆಫನ್ಯ 2:12ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;
- Deuteronomy 29:18–21 ಧರ್ಮೋಪದೇಶಕಾಂಡ 29:18–21ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು. ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.
- Obadiah 1:1–14 ಓಬದ್ಯ 1:1–14ಓಬದ್ಯನ ದರ್ಶನವು. ಕರ್ತನಾದ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾನೆ--ಕರ್ತನಿಂದ ಸುದ್ಧಿಯನ್ನು ಕೇಳಿದ್ದೇವೆ; ಅನ್ಯಜನಾಂಗಗಳಲ್ಲಿ ರಾಯ ಭಾರಿಯು ಕಳುಹಿಸಲ್ಪಟ್ಟಿದ್ದಾನೆ; ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಏಳುವ! ಇಗೋ, ನಿನ್ನನ್ನು ಅನ್ಯಜನಾಂಗಗಳಲ್ಲಿ ಹೀನವಾಗಿ ಮಾಡಿದ್ದೇನೆ. ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ. ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ? ಏಸಾವನು ಎಷ್ಟೋ ಶೋಧಿ ಸಲ್ಪಟ್ಟಿದ್ದಾನೆ, ಅವನ ರಹಸ್ಯ ಸ್ಥಳಗಳು ಹುಡುಕ ಲ್ಪಟ್ಟಿವೆ. ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ. ಕರ್ತನು ಅನ್ನುವದೇನಂದರೆ--ನಾನು ಆ ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ? ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು. ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ. ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ. ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು; ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.
- Deuteronomy 32:41–42 ಧರ್ಮೋಪದೇಶಕಾಂಡ 32:41–42ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- Psalm 17:13 ಕೀರ್ತನೆಗಳು 17:13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.