Isaiah · chapter 34 · verse 8
Isaiah 34:8 in Kannada
ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
Ekandare adu kartanu muyyi teerisuva dinavaagide; cheeyonina vyaajyadalli dandane vidhisatakka varushavu odagide.
Isaiah 34:8 in English
- King James Version (KJV)
- For [it is] the day of the LORD’s vengeance, [and] the year of recompences for the controversy of Zion.
- World English Bible (WEB)
- For the LORD has a day of vengeance, a year of recompense for the cause of Zion.
- American Standard Version (ASV)
- For Jehovah hath a day of vengeance, a year of recompense for the cause of Zion.
- Bible in Basic English (BBE)
- For it is the day of the Lord's punishment, when he gives payment for the wrongs done to Zion.
- Darby Translation (DBY)
- For it is the day of Jehovah's vengeance, the year of recompenses for the controversy of Zion.
- Webster's Bible (WBS)
- For [it is] the day of the LORD'S vengeance, [and] the year of recompenses for the controversy of Zion.
- Young's Literal Translation (YLT)
- (For a day of vengeance [is] to Jehovah, A year of recompences for Zion's strife,)
Read in context
- 6ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
- 7ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು--
- 8ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
- 9ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು.
- 10ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
Cross references
- Isaiah 63:4 ಯೆಶಾಯ 63:4ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
- Isaiah 61:2 ಯೆಶಾಯ 61:2ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
- Psalm 94:1 ಕೀರ್ತನೆಗಳು 94:1ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
- Jeremiah 46:10 ಯೆರೆಮೀಯ 46:10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
- Isaiah 35:4 ಯೆಶಾಯ 35:4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Isaiah 49:26 ಯೆಶಾಯ 49:26ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Isaiah 26:21 ಯೆಶಾಯ 26:21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Revelation 6:10–11 ಪ್ರಕಟನೆ 6:10–11ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು. ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
- Luke 18:7 ಲೂಕನು 18:7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?