Isaiah · chapter 35 · verse 1
Isaiah 35:1 in Kannada
ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.
Aranyavu nirjana pradeshavu aanandavaagiruvavu marubhoomiyu harshisi gulaabiyante araluvadu.
Isaiah 35:1 in English
- King James Version (KJV)
- The wilderness and the solitary place shall be glad for them; and the desert shall rejoice, and blossom as the rose.
- World English Bible (WEB)
- The wilderness and the dry land will be glad. The desert will rejoice and blossom like a rose.
- American Standard Version (ASV)
- The wilderness and the dry land shall be glad; and the desert shall rejoice, and blossom as the rose.
- Bible in Basic English (BBE)
- The waste land and the dry places will be glad; the lowland will have joy and be full of flowers.
- Darby Translation (DBY)
- The wilderness and the dry land shall be gladdened; and the desert shall rejoice, and blossom as the rose.
- Webster's Bible (WBS)
- The wilderness and the solitary place shall be glad for them; and the desert shall rejoice and blossom as the rose.
- Young's Literal Translation (YLT)
- They joy from the wilderness and dry place, And rejoice doth the desert, and flourish as the rose,
Read in context
- 1ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.
- 2ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- 3ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
Cross references
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Ezekiel 36:35 ಯೆಹೆಜ್ಕೇಲನು 36:35ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
- Isaiah 55:12–13 ಯೆಶಾಯ 55:12–13ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು. ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Isaiah 52:9–10 ಯೆಶಾಯ 52:9–10ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ. ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- Isaiah 27:6 ಯೆಶಾಯ 27:6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
- Isaiah 4:2 ಯೆಶಾಯ 4:2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
- Revelation 19:1–7 ಪ್ರಕಟನೆ 19:1–7ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು. ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು. ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ. ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು. ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು. ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
- Isaiah 32:15–16 ಯೆಶಾಯ 32:15–16ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು. ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು.
- Isaiah 61:10–11 ಯೆಶಾಯ 61:10–11ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು. ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Psalm 97:8 ಕೀರ್ತನೆಗಳು 97:8ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ.
- Isaiah 29:17 ಯೆಶಾಯ 29:17ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?
- Isaiah 66:10–14 ಯೆಶಾಯ 66:10–14ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ. ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ, ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ. ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.