Isaiah · chapter 35 · verse 4
Isaiah 35:4 in Kannada
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
Bhayabhraanta hrudayavullavarige--balagolliri, hedarabediri; igo, nimma devaru muyyi teerisuvadakkoo pratiphalavannu koduvadakkoo aatane bandu nimmannu rakshisuvanu endu avarige heliri.
Isaiah 35:4 in English
- King James Version (KJV)
- Say to them [that are] of a fearful heart, Be strong, fear not: behold, your God will come [with] vengeance, [even] God [with] a recompence; he will come and save you.
- World English Bible (WEB)
- Tell those who have a fearful heart, “Be strong! Don’t be afraid! Behold, your God will come with vengeance, God’s retribution. He will come and save you.
- American Standard Version (ASV)
- Say to them that are of a fearful heart, Be strong, fear not: behold, your God will come [with] vengeance, [with] the recompense of God; he will come and save you.
- Bible in Basic English (BBE)
- Say to those who are full of fear, Be strong and take heart: see, your God will give punishment; the reward of God will come; he himself will come to be your saviour.
- Darby Translation (DBY)
- Say to them that are of a timid heart, Be strong, fear not; behold your God: vengeance cometh, the recompense of God! He will come himself, and save you.
- Webster's Bible (WBS)
- Say to them [that are] of a fearful heart, Be strong, fear not: behold, your God will come [with] vengeance, [even] God [with] a recompense; he will come and save you.
- Young's Literal Translation (YLT)
- Say to the hastened of heart, 'Be strong, Fear not, lo, your God; vengeance cometh, The recompence of God, He Himself doth come and save you.'
Read in context
- 2ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- 3ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
- 4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- 5ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
- 6ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
Cross references
- James 5:7–9 ಯಾಕೋಬನು 5:7–9ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು. ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
- Isaiah 41:10–14 ಯೆಶಾಯ 41:10–14ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ. ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Zephaniah 3:16–17 ಚೆಫನ್ಯ 3:16–17ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Haggai 2:4 ಹಗ್ಗಾಯ 2:4ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
- Isaiah 34:8 ಯೆಶಾಯ 34:8ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- Isaiah 33:22 ಯೆಶಾಯ 33:22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- 1 Chronicles 28:20 1 ಪೂರ್ವಕಾಲವೃತ್ತಾಂತ 28:20ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- Isaiah 61:2 ಯೆಶಾಯ 61:2ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Isaiah 52:7–10 ಯೆಶಾಯ 52:7–10ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ! ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು. ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ. ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- Luke 21:28 ಲೂಕನು 21:28ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.