Isaiah · chapter 35 · verse 5
Isaiah 35:5 in Kannada
ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
Aaga kurudara kannugalu tereyalpadu vavu, kivudara kivigalu keluvavu.
Isaiah 35:5 in English
- King James Version (KJV)
- Then the eyes of the blind shall be opened, and the ears of the deaf shall be unstopped.
- World English Bible (WEB)
- Then the eyes of the blind will be opened, and the ears of the deaf will be unstopped.
- American Standard Version (ASV)
- Then the eyes of the blind shall be opened, and the ears of the deaf shall be unstopped.
- Bible in Basic English (BBE)
- Then the eyes of the blind will see, and the ears which are stopped will be open.
- Darby Translation (DBY)
- Then the eyes of the blind shall be opened, and the ears of the deaf be unstopped;
- Webster's Bible (WBS)
- Then the eyes of the blind shall be opened, and the ears of the deaf shall be unstopped.
- Young's Literal Translation (YLT)
- Then opened are eyes of the blind, And ears of the deaf are unstopped,
Read in context
- 3ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
- 4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- 5ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
- 6ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- 7ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
Cross references
- Isaiah 42:6–7 ಯೆಶಾಯ 42:6–7ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು -- ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- Luke 7:20–23 ಲೂಕನು 7:20–23ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು. ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು. ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.
- Isaiah 29:18 ಯೆಶಾಯ 29:18ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
- Matthew 11:3–5 ಮತ್ತಾಯನು 11:3–5ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು. ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ; ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Isaiah 32:3–4 ಯೆಶಾಯ 32:3–4ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು. ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.
- Psalm 146:8 ಕೀರ್ತನೆಗಳು 146:8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
- John 9:39 ಯೋಹಾನನು 9:39ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
- Isaiah 50:4 ಯೆಶಾಯ 50:4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
- Ephesians 1:17–18 ಎಫೆಸದವರಿಗೆ 1:17–18ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- Matthew 9:27–30 ಮತ್ತಾಯನು 9:27–30ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು. ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು. ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
- Matthew 20:30–34 ಮತ್ತಾಯನು 20:30–34ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು. ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು. ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು. ಅವರು ಆತನಿಗೆ--ಕರ್ತನೇ, ನಮ್ಮ ಕಣ್ಣುಗಳು ತೆರೆಯಲ್ಪಡಬೇಕು ಅಂದರು.ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
- Matthew 12:22 ಮತ್ತಾಯನು 12:22ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.