Isaiah · chapter 35 · verse 6
Isaiah 35:6 in Kannada
ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
Kuntanu jinkeyante haaruvanu mookana naalige haadu vadu; aranyadalli neeroo marubhoomiyalli ora tegaloo odeyuvavu.
Isaiah 35:6 in English
- King James Version (KJV)
- Then shall the lame [man] leap as an hart, and the tongue of the dumb sing: for in the wilderness shall waters break out, and streams in the desert.
- World English Bible (WEB)
- Then the lame man will leap like a deer, and the tongue of the mute will sing; for waters will break out in the wilderness, and streams in the desert.
- American Standard Version (ASV)
- Then shall the lame man leap as a hart, and the tongue of the dumb shall sing; for in the wilderness shall waters break out, and streams in the desert.
- Bible in Basic English (BBE)
- Then will the feeble-footed be jumping like a roe, and the voice which was stopped will be loud in song: for in the waste land streams will be bursting out, and waters in the dry places.
- Darby Translation (DBY)
- then shall the lame [man] leap as a hart, and the tongue of the dumb sing: for in the wilderness shall waters break out, and torrents in the desert.
- Webster's Bible (WBS)
- Then shall the lame [man] leap as a hart, and the tongue of the dumb shall sing: for in the wilderness shall waters break out, and streams in the desert.
- Young's Literal Translation (YLT)
- Then leap as a hart doth the lame, And sing doth the tongue of the dumb, For broken up in a wilderness have been waters, And streams in a desert.
Read in context
- 4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- 5ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
- 6ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- 7ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
- 8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
Cross references
- John 5:8–9 ಯೋಹಾನನು 5:8–9ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು. ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.
- Luke 11:14 ಲೂಕನು 11:14ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
- John 7:37–39 ಯೋಹಾನನು 7:37–39ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು. (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- Matthew 12:22 ಮತ್ತಾಯನು 12:22ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
- Isaiah 32:4 ಯೆಶಾಯ 32:4ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.
- Matthew 9:32–33 ಮತ್ತಾಯನು 9:32–33ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು. ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
- Psalm 51:15 ಕೀರ್ತನೆಗಳು 51:15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
- Luke 1:64 ಲೂಕನು 1:64ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು.
- Psalm 78:15–16 ಕೀರ್ತನೆಗಳು 78:15–16ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು. ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು.
- Numbers 20:11 ಅರಣ್ಯಕಾಂಡ 20:11ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
- Ezekiel 47:1–11 ಯೆಹೆಜ್ಕೇಲನು 47:1–11ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು. ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು. ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4 ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು. ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು. ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು. ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು. ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು. ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು. ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು, ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
- Psalm 46:4 ಕೀರ್ತನೆಗಳು 46:4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.