Isaiah · chapter 35 · verse 8
Isaiah 35:8 in Kannada
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
Alli raaja maargaviruvadu, adu parishuddha maargavenisikolluvadu; yaava ashu ddhanu adara mele haaduhoganu; avarigo skarave iruvadu; alli hoguva moodhanoo daaritappanu.
Isaiah 35:8 in English
- King James Version (KJV)
- And an highway shall be there, and a way, and it shall be called The way of holiness; the unclean shall not pass over it; but it [shall be] for those: the wayfaring men, though fools, shall not err [therein].
- World English Bible (WEB)
- A highway will be there, a road, and it will be called “The Holy Way”. The unclean shall not pass over it, but it will be for those who walk in the Way. Wicked fools shall not go there.
- American Standard Version (ASV)
- And a highway shall be there, and a way, and it shall be called The way of holiness; the unclean shall not pass over it; but it shall be for [the redeemed]: the wayfaring men, yea fools, shall not err [therein].
- Bible in Basic English (BBE)
- And a highway will be there; its name will be, The Holy Way; the unclean and the sinner may not go over it, and those who go on it will not be turned out of the way by the foolish.
- Darby Translation (DBY)
- And a highway shall be there and a way, and it shall be called, The way of holiness: the unclean shall not pass through it; but it shall be for these. Those that go [this] way — even fools, — shall not err [therein].
- Webster's Bible (WBS)
- And a highway shall be there, and a way, and it shall be called, The way of holiness; the unclean shall not pass over it; but it [shall be] for those: the way-faring men, though fools, shall not err [therein] .
- Young's Literal Translation (YLT)
- And a highway hath been there, and a way, And the 'way of holiness' is called to it, Not pass over it doth the unclean, And He Himself [is] by them, Whoso is going in the way — even fools err not.
Read in context
- 6ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- 7ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
- 8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- 9ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- 10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
Cross references
- Matthew 7:13–14 ಮತ್ತಾಯನು 7:13–14ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ. ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- 1 Peter 1:14–15 1 ಪೇತ್ರನು 1:14–15ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.
- Hebrews 10:20–23 ಇಬ್ರಿಯರಿಗೆ 10:20–23ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ. ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- 1 Peter 2:9–10 1 ಪೇತ್ರನು 2:9–10ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- Jeremiah 31:21 ಯೆರೆಮೀಯ 31:21ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
- Titus 2:11–14 ತೀತನಿಗೆ 2:11–14ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ. ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Isaiah 30:21 ಯೆಶಾಯ 30:21ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.