Isaiah · chapter 35 · verse 9
Isaiah 35:9 in Kannada
ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
Sinhavu alli iradu illave kroora vaada mrugagalu adara mele hogavu, avu alli kaanuvade illa; bidugadeyaadavare alli nadeyuvaru.kartaninda vimochisalpattavaru hintirugikondu tamma talegala mele utsaahadhvani nityavaada santoshagalondige cheeyonige baru varu; avaru harshaanandagalannu anubhavisu varu. Duhkhavoo, nittusiroo odihoguvavu.
Isaiah 35:9 in English
- King James Version (KJV)
- No lion shall be there, nor [any] ravenous beast shall go up thereon, it shall not be found there; but the redeemed shall walk [there:]
- World English Bible (WEB)
- No lion will be there, nor will any ravenous animal go up on it. They will not be found there; but the redeemed will walk there.
- American Standard Version (ASV)
- No lion shall be there, nor shall any ravenous beast go up thereon; they shall not be found there; but the redeemed shall walk [there]:
- Bible in Basic English (BBE)
- No lion will be there, or any cruel beast; they will not be seen there; but those for whom the Lord has given a price,
- Darby Translation (DBY)
- No lion shall be there, nor shall ravenous beast go up thereon, nor be found there; but the redeemed shall walk [there].
- Webster's Bible (WBS)
- No lion shall be there, nor [any] ravenous beast shall go up thereon, it shall not be found there; but the redeemed shall walk [there] :
- Young's Literal Translation (YLT)
- No lion is there, yea, a destructive beast Ascendeth it not, it is not found there, And walked have the redeemed,
Read in context
- 7ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
- 8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- 9ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- 10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
Cross references
- Isaiah 62:12 ಯೆಶಾಯ 62:12ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
- Ezekiel 34:25 ಯೆಹೆಜ್ಕೇಲನು 34:25ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
- Leviticus 26:6 ಯಾಜಕಕಾಂಡ 26:6ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
- Isaiah 30:6 ಯೆಶಾಯ 30:6ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
- Isaiah 63:4 ಯೆಶಾಯ 63:4ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
- Exodus 15:13 ವಿಮೋಚನಕಾಂಡ 15:13ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
- Isaiah 11:6–9 ಯೆಶಾಯ 11:6–9ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Isaiah 65:25 ಯೆಶಾಯ 65:25ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Psalm 107:2 ಕೀರ್ತನೆಗಳು 107:2ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
- Hosea 2:18 ಹೋಶೇಯ 2:18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Revelation 20:1–3 ಪ್ರಕಟನೆ 20:1–3ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.