Isaiah · chapter 36 · verse 14
Isaiah 36:14 in Kannada
ಇವನು ನಿಮಗೆ--ಹಿಜ್ಕೀಯನು ನಿಮಗೆ ಮೋಸಮಾಡದಿರಲಿ, ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ.
Ivanu nimage--hijkeeyanu nimage mosamaadadirali, avanu nimmannu bidisalu shaktanalla.
Isaiah 36:14 in English
- King James Version (KJV)
- Thus saith the king, Let not Hezekiah deceive you: for he shall not be able to deliver you.
- World English Bible (WEB)
- The king says, ‘Don’t let Hezekiah deceive you; for he will not be able to deliver you.
- American Standard Version (ASV)
- Thus saith the king, Let not Hezekiah deceive you; for he will not be able to deliver you:
- Bible in Basic English (BBE)
- This is what the king says: Do not be tricked by Hezekiah, for there is no salvation for you in him.
- Darby Translation (DBY)
- Thus says the king: Let not Hezekiah deceive you; for he will not be able to deliver you.
- Webster's Bible (WBS)
- Thus saith the king, Let not Hezekiah deceive you: for he will not be able to deliver you.
- Young's Literal Translation (YLT)
- Thus said the king, Let not Hezekiah lift you up, for he is not able to deliver you;
Read in context
- 12ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು.
- 13ಆಗ ರಬ್ಷಾಕನು ನಿಂತುಕೊಂಡು ಯೆಹೂ ದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನಂದರೆ--ಅಶ್ಶೂರಿನ ಅರಸನಾದ ಮಹಾ ರಾಜನ ಮಾತುಗಳನ್ನು ಕೇಳಿರಿ.
- 14ಇವನು ನಿಮಗೆ--ಹಿಜ್ಕೀಯನು ನಿಮಗೆ ಮೋಸಮಾಡದಿರಲಿ, ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ.
- 15ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;
- 16ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ.
Cross references
- Revelation 13:5–6 ಪ್ರಕಟನೆ 13:5–6ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
- 2 Thessalonians 2:4 2 ಥೆಸಲೊನೀಕದವರಿಗೆ 2:4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
- Daniel 3:15–17 ದಾನಿಯೇಲನು 3:15–17ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು. ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
- 2 Kings 19:22 2 ಅರಸುಗಳು 19:22ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.
- 2 Chronicles 32:13–19 2 ಪೂರ್ವಕಾಲವೃತ್ತಾಂತ 32:13–19ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ? ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು? ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ. ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು. ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು. ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು. ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
- 2 Chronicles 32:11 2 ಪೂರ್ವಕಾಲವೃತ್ತಾಂತ 32:11ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
- Daniel 6:20 ದಾನಿಯೇಲನು 6:20ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Isaiah 37:10–13 ಯೆಶಾಯ 37:10–13ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು; ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ? ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ? ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
- 2 Kings 19:10–13 2 ಅರಸುಗಳು 19:10–13ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ. ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ? ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು, ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.