Isaiah · chapter 36 · verse 17
Isaiah 36:17 in Kannada
ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು.
Svalpa kaalavaada nantara naanu bandu nimmannu dhaanya, draakshaarasa, aahaara, draakshetota ivu samruddhi yaagiruva nimma deshakke samaanavaagiruva innondu deshakke karakondu hoguvenu.
Isaiah 36:17 in English
- King James Version (KJV)
- Until I come and take you away to a land like your own land, a land of corn and wine, a land of bread and vineyards.
- World English Bible (WEB)
- until I come and take you away to a land like your own land, a land of grain and new wine, a land of bread and vineyards.
- American Standard Version (ASV)
- until I come and take you away to a land like your own land, a land of grain and new wine, a land of bread and vineyards.
- Bible in Basic English (BBE)
- Till I come and take you away to a land like yours, a land of grain and wine, a land of bread and vine-gardens.
- Darby Translation (DBY)
- until I come and take you away to a land like your own land, a land of corn and wine, a land of bread and vineyards.
- Webster's Bible (WBS)
- Until I come and take you away to a land like your own land, a land of corn and wine, a land of bread and vineyards.
- Young's Literal Translation (YLT)
- till my coming in, and I have taken you unto a land like your own land, a land of corn and wine, a land of bread and vineyards;
Read in context
- 15ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;
- 16ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ.
- 17ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು.
- 18ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
- 19ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?
Cross references
- 2 Kings 18:32 2 ಅರಸುಗಳು 18:32ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.
- Job 20:17 ಯೋಬನು 20:17ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು.
- Deuteronomy 11:12 ಧರ್ಮೋಪದೇಶಕಾಂಡ 11:12ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- 2 Kings 24:11 2 ಅರಸುಗಳು 24:11ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು.
- Deuteronomy 8:7–9 ಧರ್ಮೋಪದೇಶಕಾಂಡ 8:7–9ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ. ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ. ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
- Proverbs 12:10 ಜ್ಞಾನೋಕ್ತಿಗಳು 12:10ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
- 2 Kings 18:9–12 2 ಅರಸುಗಳು 18:9–12ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು. ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು. ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
- 2 Kings 17:6–23 2 ಅರಸುಗಳು 17:6–23ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು. ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು. ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು. ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು-- ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು. ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು. ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ. ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು. ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು. ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ. ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.