Isaiah · chapter 36 · verse 18
Isaiah 36:18 in Kannada
ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
Kartanu nammannu tappisuvanu endu heli hijkeeyanu nimmannu prerepisadante echcharike yaagirri. Yaava janaangada devarugalaadaroo tanna deshagalannu ashshoorada arasana kaiyinda bidisidavo?
Isaiah 36:18 in English
- King James Version (KJV)
- [Beware] lest Hezekiah persuade you, saying, The LORD will deliver us. Hath any of the gods of the nations delivered his land out of the hand of the king of Assyria?
- World English Bible (WEB)
- Beware lest Hezekiah persuade you, saying, “The LORD will deliver us.” Have any of the gods of the nations delivered their lands from the hand of the king of Assyria?
- American Standard Version (ASV)
- Beware lest Hezekiah persuade you, saying, Jehovah will deliver us. Hath any of the gods of the nations delivered his land out of the hand of the king of Assyria?
- Bible in Basic English (BBE)
- Give no attention to Hezekiah when he says to you, The Lord will keep us safe. Has any one of the gods of the nations kept his land from falling into the hands of the king of Assyria?
- Darby Translation (DBY)
- Let not Hezekiah persuade you, saying, Jehovah will deliver us. Has any of the gods of the nations delivered his land out of the hand of the king of Assyria?
- Webster's Bible (WBS)
- [Beware] lest Hezekiah persuade you, saying, The LORD will deliver us. Hath any of the gods of the nations delivered his land out of the hand of the king of Assyria?
- Young's Literal Translation (YLT)
- lest Hezekiah doth persuade you, saying, Jehovah doth deliver us. 'Have the gods of the nations delivered each his land out of the hand of the king of Asshur?
Read in context
- 16ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ.
- 17ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು.
- 18ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
- 19ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?
- 20ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.
Cross references
- Isaiah 37:17–18 ಯೆಶಾಯ 37:17–18ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು. ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.
- Isaiah 36:15 ಯೆಶಾಯ 36:15ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;
- 2 Kings 19:17–18 2 ಅರಸುಗಳು 19:17–18ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ. ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.
- Jeremiah 10:10–12 ಯೆರೆಮೀಯ 10:10–12ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು. ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- 2 Kings 19:12–13 2 ಅರಸುಗಳು 19:12–13ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು, ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
- Isaiah 37:12–13 ಯೆಶಾಯ 37:12–13ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ? ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
- Psalm 115:2–8 ಕೀರ್ತನೆಗಳು 115:2–8ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು? ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ. ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Isaiah 36:10 ಯೆಶಾಯ 36:10ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.
- 2 Chronicles 32:13–17 2 ಪೂರ್ವಕಾಲವೃತ್ತಾಂತ 32:13–17ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ? ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು? ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ. ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು. ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
- Psalm 12:4 ಕೀರ್ತನೆಗಳು 12:4ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
- Isaiah 36:7 ಯೆಶಾಯ 36:7ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
- Isaiah 37:10 ಯೆಶಾಯ 37:10ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
Original words (Hebrew)
- Hezekiah · H2396חִזְקִיָּה Chizqîyâh
- persuade · H5496סוּת çûwth
- saying · H559אָמַר ʼâmar
- deliver · H5337נָצַל nâtsal
- any · H376אִישׁ ʼîysh
- gods · H430אֱלֹהִים ʼĕlôhîym
- nations · H1471גּוֹי gôwy
- delivered · H5337נָצַל nâtsal
- land · H776אֶרֶץ ʼerets
- hand · H3027יָד yâd
- king · H4428מֶלֶךְ melek
- Assyria · H804אַשּׁוּר ʼAshshûwr