Isaiah · chapter 37 · verse 26
Isaiah 37:26 in Kannada
ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
Heegaagabekendu bahukaalada hindeye gottumaadiddannu neenu kelillavo? Eega poorvakaaladalli nirnayisiddannu neraveri siddene. Aadadarindale kotegalulla pattana galannu haalu dibbagalannaagi maaduvadu ninage saadhyavaayitu;
Isaiah 37:26 in English
- King James Version (KJV)
- Hast thou not heard long ago, [how] I have done it; [and] of ancient times, that I have formed it? now have I brought it to pass, that thou shouldest be to lay waste defenced cities [into] ruinous heaps.
- World English Bible (WEB)
- “‘Have you not heard how I have done it long ago, and formed it in ancient times? Now I have brought it to pass, that it should be yours to destroy fortified cities, turning them into ruinous heaps.
- American Standard Version (ASV)
- Hast thou not heard how I have done it long ago, and formed it of ancient times? now have I brought it to pass, that it should be thine to lay waste fortified cities into ruinous heaps.
- Bible in Basic English (BBE)
- Has it not come to your ears how I did it long before, purposing it in times long past? Now I have given effect to my design, so that by you strong towns might be turned into masses of broken walls.
- Darby Translation (DBY)
- Hast thou not heard that long ago I did it, and that from ancient days I formed it? Now have I brought it to pass, that thou shouldest lay waste fortified cities [into] ruinous heaps.
- Webster's Bible (WBS)
- Hast thou not heard long ago, [how] I have done it; [and] of ancient times, that I have formed it? now have I brought it to pass, that thou shouldst be to lay waste fortified cities [into] ruinous heaps.
- Young's Literal Translation (YLT)
- Hast thou not heard from afar? — it I did, From days of old — that I formed it. Now, I have brought it in, And it is to make desolate, Ruinous heaps — fenced cities,
Read in context
- 24ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
- 25ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
- 26ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
- 27ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.
- 28ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.
Cross references
- Acts 4:27–28 ಅಪೊಸ್ತಲರ ಕೃತ್ಯಗಳು 4:27–28ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- 1 Peter 2:8 1 ಪೇತ್ರನು 2:8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Isaiah 10:15 ಯೆಶಾಯ 10:15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- Isaiah 10:5–6 ಯೆಶಾಯ 10:5–6ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Genesis 50:20 ಆದಿಕಾಂಡ 50:20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
- Jude 1:4 ಯೂದನು 1:4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- Psalm 17:13 ಕೀರ್ತನೆಗಳು 17:13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
- Isaiah 45:7 ಯೆಶಾಯ 45:7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
- Isaiah 25:1–2 ಯೆಶಾಯ 25:1–2ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು. ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.