Isaiah · chapter 37 · verse 35
Isaiah 37:35 in Kannada
ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
Ee pattanavannu nanagaagiyoo nanna sevakanaada daaveedanigoskaravaagiyoo idannu kaapaadu venu endu kartanu heluttaane.
Isaiah 37:35 in English
- King James Version (KJV)
- For I will defend this city to save it for mine own sake, and for my servant David’s sake.
- World English Bible (WEB)
- ‘For I will defend this city to save it, for my own sake, and for my servant David’s sake.’”
- American Standard Version (ASV)
- For I will defend this city to save it, for mine own sake, and for my servant David’s sake.
- Bible in Basic English (BBE)
- For I will keep this town safe, for my honour, and for the honour of my servant David.
- Darby Translation (DBY)
- And I will defend this city, to save it, for mine own sake, and for my servant David's sake.
- Webster's Bible (WBS)
- For I will defend this city, to save it for my own sake, and for my servant David's sake.
- Young's Literal Translation (YLT)
- And I have covered over this city, To save it, for Mine own sake, And for the sake of David My servant.'
Read in context
- 33ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
- 34ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ.
- 35ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
- 36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- 37ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
Cross references
- 2 Kings 20:6 2 ಅರಸುಗಳು 20:6ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ.
- Isaiah 31:5 ಯೆಶಾಯ 31:5ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
- Isaiah 38:6 ಯೆಶಾಯ 38:6ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು.
- Ephesians 1:14 ಎಫೆಸದವರಿಗೆ 1:14ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Jeremiah 33:15–16 ಯೆರೆಮೀಯ 33:15–16ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು. ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- Ezekiel 37:24–25 ಯೆಹೆಜ್ಕೇಲನು 37:24–25ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- Jeremiah 30:9 ಯೆರೆಮೀಯ 30:9ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.
- Ezekiel 36:22 ಯೆಹೆಜ್ಕೇಲನು 36:22ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
- 1 Kings 11:36 1 ಅರಸುಗಳು 11:36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- Ezekiel 20:9 ಯೆಹೆಜ್ಕೇಲನು 20:9ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;