Isaiah · chapter 38 · verse 1
Isaiah 38:1 in Kannada
ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.
Aa kaaladalli hijkeeyanu rogiyaagi saayuvadakkiddanu. Aaga aamochana maganoo pravaadiyoo aada yeshaayanu avana balige bandu avanige--ninna maneya vishayavaagi vyavasthe maadiko; yaakandare neenu uliyuva haagilla, saayabekaagide embadaagi kartanu heluttaane endu helidanu.
Isaiah 38:1 in English
- King James Version (KJV)
- In those days was Hezekiah sick unto death. And Isaiah the prophet the son of Amoz came unto him, and said unto him, Thus saith the LORD, Set thine house in order: for thou shalt die, and not live.
- World English Bible (WEB)
- In those days Hezekiah was sick and near death. Isaiah the prophet, the son of Amoz, came to him, and said to him, “The LORD says, ‘Set your house in order, for you will die, and not live.’”
- American Standard Version (ASV)
- In those days was Hezekiah sick unto death. And Isaiah the prophet the son of Amoz came to him, and said unto him, Thus saith Jehovah, Set thy house in order; for thou shalt die, and not live.
- Bible in Basic English (BBE)
- In those days Hezekiah was ill and near death. And Isaiah the prophet, the son of Amoz, came to him, and said to him, The Lord says, Put your house in order; for your death is near.
- Darby Translation (DBY)
- In those days Hezekiah was sick unto death. And the prophet Isaiah the son of Amoz came to him, and said to him, Thus saith Jehovah: Set thy house in order; for thou shalt die, and not live.
- Webster's Bible (WBS)
- In those days was Hezekiah sick with a mortal disease. And Isaiah the prophet the son of Amoz came to him, and said to him, Thus saith the LORD, Set thy house in order: for thou shalt die, and not live.
- Young's Literal Translation (YLT)
- In those days hath Hezekiah been sick unto death, and come in unto him doth Isaiah son of Amoz, the prophet, and saith unto him, 'Thus said Jehovah: Give a charge to thy house, for thou [art] dying, and dost not live.'
Read in context
- 1ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.
- 2ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ--
- 3ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.
Cross references
- Isaiah 38:1–8 ಯೆಶಾಯ 38:1–8ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು. ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ-- ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು. ಆಗ ಕರ್ತನ ವಾಕ್ಯವು ಯೆಶಾ ಯನ ಬಳಿಗೆ ಬಂದು ಹೇಳಿದ್ದೇನಂದರೆ-- ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು. ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ. ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
- 2 Chronicles 32:24 2 ಪೂರ್ವಕಾಲವೃತ್ತಾಂತ 32:24ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.
- 2 Kings 20:1–11 2 ಅರಸುಗಳು 20:1–11ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ-- ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು. ಆದರೆ ಯೆಶಾಯನು ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಕರ್ತನ ವಾಕ್ಯವು ಅವ ನಿಗೆ ಉಂಟಾಗಿ-- ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ. ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ. ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು. ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು. ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು. ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು. ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- Jonah 3:10 ಯೋನ 3:10ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- Acts 9:37 ಅಪೊಸ್ತಲರ ಕೃತ್ಯಗಳು 9:37ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
- Philippians 2:27–30 ಫಿಲಿಪ್ಪಿಯವರಿಗೆ 2:27–30ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು. ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ. ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು. ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
- Isaiah 37:21 ಯೆಶಾಯ 37:21ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು
- Isaiah 37:2 ಯೆಶಾಯ 37:2ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Jeremiah 18:7–10 ಯೆರೆಮೀಯ 18:7–10ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು. ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
- Isaiah 1:1 ಯೆಶಾಯ 1:1ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
Original words (Hebrew)
- days · H3117יוֹם yôwm
- Hezekiah · H2396חִזְקִיָּה Chizqîyâh
- sick · H2470חָלָה châlâh
- death · H4191מוּת mûwth
- Isaiah · H3470יְשַׁעְיָה Yᵉshaʻyâh
- prophet · H5030נָבִיא nâbîyʼ
- son · H1121בֵּן bên
- Amoz · H531אָמוֹץ ʼÂmôwts
- came · H935בּוֹא bôwʼ
- said · H559אָמַר ʼâmar
- saith · H559אָמַר ʼâmar
- house · H1004בַּיִת bayith
- order · H6680צָוָה tsâvâh
- die · H4191מוּת mûwth
- live · H2421חָיָה châyâh