Isaiah · chapter 38 · verse 10
Isaiah 38:10 in Kannada
ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು.
Nanna divasagalu kadime maadalpattaddarinda naanu paataalada dvaara galolage hogabeku nanna aayushyadalli mikkaa daddu nanage tappihoyitu endu andu kondanu.
Isaiah 38:10 in English
- King James Version (KJV)
- I said in the cutting off of my days, I shall go to the gates of the grave: I am deprived of the residue of my years.
- World English Bible (WEB)
- I said, “In the middle of my life I go into the gates of Sheol. I am deprived of the residue of my years.”
- American Standard Version (ASV)
- I said, In the noontide of my days I shall go into the gates of Sheol: I am deprived of the residue of my years.
- Bible in Basic English (BBE)
- I said, In the quiet of my days I am going down into the underworld: the rest of my years are being taken away from me.
- Darby Translation (DBY)
- I said, In the meridian of my days I shall go to the gates of Sheol: I am deprived of the rest of my years.
- Webster's Bible (WBS)
- I said in the cutting off of my days, I shall go to the gates of the grave: I am deprived of the residue of my years.
- Young's Literal Translation (YLT)
- 'I — I said in the cutting off of my days, I go in to the gates of Sheol, I have numbered the remnant of mine years.
Read in context
- 8ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
- 9ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು--
- 10ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು.
- 11ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.
- 12ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
Cross references
- 2 Corinthians 1:9 2 ಕೊರಿಂಥದವರಿಗೆ 1:9ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
- Psalm 102:24 ಕೀರ್ತನೆಗಳು 102:24ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.
- Psalm 107:18 ಕೀರ್ತನೆಗಳು 107:18ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
- Job 7:7 ಯೋಬನು 7:7ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
- Job 6:11 ಯೋಬನು 6:11ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
- Job 17:11–16 ಯೋಬನು 17:11–16ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು. ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ. ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ. ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು. ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು. ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
- Isaiah 38:1 ಯೆಶಾಯ 38:1ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.