Isaiah · chapter 38 · verse 7
Isaiah 38:7 in Kannada
ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ.
Kartanu taanu nudidaddannu neraverisuvanu embadakke ondu gurutannu kaanuvi.
Isaiah 38:7 in English
- King James Version (KJV)
- And this [shall be] a sign unto thee from the LORD, that the LORD will do this thing that he hath spoken;
- World English Bible (WEB)
- This shall be the sign to you from the LORD, that the LORD will do this thing that he has spoken.
- American Standard Version (ASV)
- And this shall be the sign unto thee from Jehovah, that Jehovah will do this thing that he hath spoken:
- Bible in Basic English (BBE)
- And Isaiah said, This is the sign the Lord will give you, that he will do what he has said:
- Darby Translation (DBY)
- And this [shall be] the sign to thee from Jehovah, that Jehovah will do this thing that he hath spoken:
- Webster's Bible (WBS)
- And this [shall be] a sign to thee from the LORD, that the LORD will do this thing that he hath spoken;
- Young's Literal Translation (YLT)
- And this [is] to thee the sign from Jehovah, that Jehovah doth this thing that He hath spoken.
Read in context
- 5ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
- 6ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು.
- 7ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ.
- 8ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
- 9ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು--
Cross references
- Isaiah 37:30 ಯೆಶಾಯ 37:30ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
- Judges 6:37–39 ನ್ಯಾಯಸ್ಥಾಪಕರು 6:37–39ಇಗೋ, ಉಣ್ಣೆಯ ಗುಜ್ಜನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ ನೀನು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ರಕ್ಷಿಸುವಿ ಎಂಬದನ್ನು ನಾನು ತಿಳಿಯುವೆನು ಅಂದನು. ಅದು ಹಾಗೆಯೇ ಆಯಿತು. ಅವನು ಮರುದಿನ ಉದಯ ದಲ್ಲಿ ಎದ್ದು ಉಣ್ಣೆಯನ್ನು ತೆಗೆದುಕೊಂಡು ಅದರೊಳ ಗಿದ್ದ ಮಂಜಿನ ನೀರನ್ನು ಒಂದು ಬೋಗುಣಿ ತುಂಬಾ ಹಿಂಡಿದನು. ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು.ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
- Isaiah 7:11–14 ಯೆಶಾಯ 7:11–14ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು. ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು. ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ? ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- 2 Kings 20:8–21 2 ಅರಸುಗಳು 20:8–21ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು. ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು. ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು. ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು. ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು. ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ. ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು. ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು. ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು. ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ; ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು. ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು. ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು. ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
- Judges 6:17–22 ನ್ಯಾಯಸ್ಥಾಪಕರು 6:17–22ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು. ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು. ಆಗ ಗಿದ್ಯೋನನು ಒಳಗೆ ಹೋಗಿ ಒಂದು ಮೇಕೆಯ ಮರಿಯನ್ನೂ ಒಂದು ಏಫಾದ ಹಿಟ್ಟಿನಲ್ಲಿ ಹುಳಿ ಇಲ್ಲದ ರೊಟ್ಟಿಯನ್ನೂ ಸಿದ್ಧಮಾಡಿ ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು ರಸವನ್ನು ಪಾತ್ರೆಯಲ್ಲಿ ಹೊಯಿದು ಅದನ್ನು ಹೊರಗೆ ಮರದ ಕೆಳಗೆ ಇದ್ದ ಆತನ ಬಳಿ ಯಲ್ಲಿ ತಂದಿಟ್ಟನು. ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು. ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು. ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
- Genesis 9:13 ಆದಿಕಾಂಡ 9:13ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.
- Isaiah 38:22 ಯೆಶಾಯ 38:22ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.