Isaiah · chapter 40 · verse 19
Isaiah 40:19 in Kannada
ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
Kanchugaaranu vigrahavannu eraka hoyyuttaane; akkasaaliganu adakke chinnada kavachavannu hodisi; belliya sarapanigalannu haakuvanu.
Isaiah 40:19 in English
- King James Version (KJV)
- The workman melteth a graven image, and the goldsmith spreadeth it over with gold, and casteth silver chains.
- World English Bible (WEB)
- A workman has cast an image, and the goldsmith overlays it with gold, and casts silver chains for it.
- American Standard Version (ASV)
- The image, a workman hath cast [it], and the goldsmith overlayeth it with gold, and casteth [for it] silver chains.
- Bible in Basic English (BBE)
- The workman makes an image, and the gold-worker puts gold plates over it, and makes silver bands for it.
- Darby Translation (DBY)
- The workman casteth a graven image, and the goldsmith spreadeth it over with gold, and casteth silver chains [for it].
- Webster's Bible (WBS)
- The workman melteth a graven image, and the goldsmith spreadeth it over with gold, and casteth silver chains.
- Young's Literal Translation (YLT)
- The graven image poured out hath a artisan, And a refiner with gold spreadeth it over, And chains of silver he is refining.
Read in context
- 17ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
- 18ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
- 19ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
- 20ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
- 21ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?
Cross references
- Jeremiah 10:9 ಯೆರೆಮೀಯ 10:9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
- Habakkuk 2:18–19 ಹಬಕ್ಕೂಕ 2:18–19ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು? ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Judges 17:4 ನ್ಯಾಯಸ್ಥಾಪಕರು 17:4ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು.
- Exodus 32:2–4 ವಿಮೋಚನಕಾಂಡ 32:2–4ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು. ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು. ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
- Psalm 115:4–8 ಕೀರ್ತನೆಗಳು 115:4–8ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Isaiah 46:6–7 ಯೆಶಾಯ 46:6–7ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು. ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
- Jeremiah 10:3–5 ಯೆರೆಮೀಯ 10:3–5ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ. ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
- Isaiah 37:18–19 ಯೆಶಾಯ 37:18–19ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
- Hosea 8:6 ಹೋಶೇಯ 8:6ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
- Isaiah 44:10–12 ಯೆಶಾಯ 44:10–12ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು? ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು. ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
- Psalm 135:18 ಕೀರ್ತನೆಗಳು 135:18ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Isaiah 2:20 ಯೆಶಾಯ 2:20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.