Isaiah · chapter 40 · verse 3
Isaiah 40:3 in Kannada
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
Igo, ondu vaani, aranyadalli kartana daariyannu nettage maadiri; adaviyalli namma devarige raajamaargavannu nettage maadiri.
Isaiah 40:3 in English
- King James Version (KJV)
- The voice of him that crieth in the wilderness, Prepare ye the way of the LORD, make straight in the desert a highway for our God.
- World English Bible (WEB)
- The voice of one who calls out, “Prepare the way of the LORD in the wilderness! Make a level highway in the desert for our God.
- American Standard Version (ASV)
- The voice of one that crieth, Prepare ye in the wilderness the way of Jehovah; make level in the desert a highway for our God.
- Bible in Basic English (BBE)
- A voice of one crying, Make ready in the waste land the way of the Lord, make level in the lowland a highway for our God.
- Darby Translation (DBY)
- The voice of one crying in the wilderness: Prepare ye the way of Jehovah, make straight in the desert a highway for our God!
- Webster's Bible (WBS)
- The voice of him that crieth in the wilderness, Prepare ye the way of the LORD, make straight in the desert a highway for our God.
- Young's Literal Translation (YLT)
- A voice is crying — in a wilderness — Prepare ye the way of Jehovah, Make straight in a desert a highway to our God.
Read in context
- 1ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
- 2ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- 3ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
- 4ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
- 5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
Cross references
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- Mark 1:2–5 ಮಾರ್ಕನು 1:2–5ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ. ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು. ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
- John 1:23 ಯೋಹಾನನು 1:23ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
- Matthew 3:1–3 ಮತ್ತಾಯನು 3:1–3ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ-- ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು. ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
- Luke 1:16–17 ಲೂಕನು 1:16–17ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Luke 1:76–77 ಲೂಕನು 1:76–77ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ. ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
- Malachi 4:5–6 ಮಲಾಕಿಯ 4:5–6ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು. ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Isaiah 57:14 ಯೆಶಾಯ 57:14ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
- Isaiah 43:19 ಯೆಶಾಯ 43:19ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
- Isaiah 62:10–11 ಯೆಶಾಯ 62:10–11ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ. ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
- Isaiah 35:8 ಯೆಶಾಯ 35:8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- Luke 3:2–6 ಲೂಕನು 3:2–6ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು. ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು. ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು; ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.