Isaiah · chapter 40 · verse 6
Isaiah 40:6 in Kannada
ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
Vaaniyu koogu annuttade. Avanu--naanu enu koogali annalu ellaa naramanushyaru hullina haagiddaare. Kartana shvaasavu avara mele beesuvadarinda avara laavanyavellaa holada hoovinantide.
Isaiah 40:6 in English
- King James Version (KJV)
- The voice said, Cry. And he said, What shall I cry? All flesh [is] grass, and all the goodliness thereof [is] as the flower of the field:
- World English Bible (WEB)
- The voice of one saying, “Cry out!” One said, “What shall I cry?” “All flesh is like grass, and all its glory is like the flower of the field.
- American Standard Version (ASV)
- The voice of one saying, Cry. And one said, What shall I cry? All flesh is grass, and all the goodliness thereof is as the flower of the field.
- Bible in Basic English (BBE)
- A voice of one saying, Give a cry! And I said, What is my cry to be? All flesh is grass, and all its strength like the flower of the field.
- Darby Translation (DBY)
- A voice saith, Cry. And he saith, What shall I cry? — All flesh is grass, and all the comeliness thereof as the flower of the field.
- Webster's Bible (WBS)
- The voice said, Cry. And he said, What shall I cry? All flesh [is] grass, and all its goodliness [is] as the flower of the field:
- Young's Literal Translation (YLT)
- A voice is saying, 'Call,' And he said, 'What do I call?' All flesh [is] grass, and all its goodliness [is] As a flower of the field:
Read in context
- 4ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
- 5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- 6ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
- 7ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.
- 8ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
Cross references
- 1 Peter 1:24–25 1 ಪೇತ್ರನು 1:24–25ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Psalm 103:15–16 ಕೀರ್ತನೆಗಳು 103:15–16ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- Psalm 102:11 ಕೀರ್ತನೆಗಳು 102:11ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
- James 1:10–11 ಯಾಕೋಬನು 1:10–11ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Job 14:2 ಯೋಬನು 14:2ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- Psalm 90:5–6 ಕೀರ್ತನೆಗಳು 90:5–6ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ. ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ.
- Psalm 92:7 ಕೀರ್ತನೆಗಳು 92:7ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
- Isaiah 37:27 ಯೆಶಾಯ 37:27ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.
- Isaiah 61:1–2 ಯೆಶಾಯ 61:1–2ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
- Jeremiah 31:6 ಯೆರೆಮೀಯ 31:6ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
- Isaiah 40:3 ಯೆಶಾಯ 40:3ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.