Isaiah · chapter 40 · verse 8
Isaiah 40:8 in Kannada
ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
Hullu onagihoguvadu hoovu baadihoguvadu. Aadare namma devara vaakyavu sadaakaala nilluvadu endu uttaravaayitu.
Isaiah 40:8 in English
- King James Version (KJV)
- The grass withereth, the flower fadeth: but the word of our God shall stand for ever.
- World English Bible (WEB)
- The grass withers, the flower fades; but the word of our God stands forever.”
- American Standard Version (ASV)
- The grass withereth, the flower fadeth; but the word of our God shall stand forever.
- Bible in Basic English (BBE)
- The grass is dry, the flower is dead; but the word of our God is eternal.
- Darby Translation (DBY)
- The grass withereth, the flower fadeth; but the word of our God abideth for ever.
- Webster's Bible (WBS)
- The grass withereth, the flower fadeth: but the word of our God shall shall stand forever.
- Young's Literal Translation (YLT)
- Withered hath grass, faded the flower, But a word of our God riseth for ever.
Read in context
- 6ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
- 7ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.
- 8ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
- 9ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
- 10ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
Cross references
- Mark 13:31 ಮಾರ್ಕನು 13:31ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- 1 Peter 1:25 1 ಪೇತ್ರನು 1:25ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Psalm 119:89–91 ಕೀರ್ತನೆಗಳು 119:89–91ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ. ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ. ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ.
- Matthew 5:18 ಮತ್ತಾಯನು 5:18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Isaiah 55:10–11 ಯೆಶಾಯ 55:10–11ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- John 10:35 ಯೋಹಾನನು 10:35ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
- Isaiah 59:21 ಯೆಶಾಯ 59:21ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- John 12:34 ಯೋಹಾನನು 12:34ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Romans 3:1–3 ರೋಮಾಪುರದವರಿಗೆ 3:1–3ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು? ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು. ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?