Isaiah · chapter 41 · verse 10
Isaiah 41:10 in Kannada
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
Neenantoo hedarabeda; naane ninnondigiddene; digbhramegolladiru. Naane ninna devaru; naanu ninnannu balapadi suttene; haudu, naanu ninage sahaaya maadu ttene. Haudu, nanna neetiya balagaiyinda ninnannu etti hidiyuttene.
Isaiah 41:10 in English
- King James Version (KJV)
- Fear thou not; for I [am] with thee: be not dismayed; for I [am] thy God: I will strengthen thee; yea, I will help thee; yea, I will uphold thee with the right hand of my righteousness.
- World English Bible (WEB)
- Don’t you be afraid, for I am with you. Don’t be dismayed, for I am your God. I will strengthen you. Yes, I will help you. Yes, I will uphold you with the right hand of my righteousness.
- American Standard Version (ASV)
- fear thou not, for I am with thee; be not dismayed, for I am thy God; I will strengthen thee; yea, I will help thee; yea, I will uphold thee with the right hand of my righteousness.
- Bible in Basic English (BBE)
- Have no fear, for I am with you; do not be looking about in trouble, for I am your God; I will give you strength, yes, I will be your helper; yes, my true right hand will be your support.
- Darby Translation (DBY)
- — Fear not, for I [am] with thee; be not dismayed, for I [am] thy God: I will strengthen thee, yea, I will help thee, yea, I will uphold thee with the right hand of my righteousness.
- Webster's Bible (WBS)
- Fear thou not; for I [am] with thee: be not dismayed; for I [am] thy God: I will strengthen thee; yes, I will help thee; yes, I will uphold thee with the right hand of my righteousness.
- Young's Literal Translation (YLT)
- Be not afraid, for with thee I [am], Look not around, for I [am] thy God, I have strengthened thee, Yea, I have helped thee, yea, I upheld thee, With the right hand of My righteousness.
Read in context
- 8ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
- 9ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
- 10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- 11ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
- 12ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.
Cross references
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Isaiah 43:1–2 ಯೆಶಾಯ 43:1–2ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Deuteronomy 31:6–8 ಧರ್ಮೋಪದೇಶಕಾಂಡ 31:6–8ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು. ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು. ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Isaiah 40:29–31 ಯೆಶಾಯ 40:29–31ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ. ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- 2 Corinthians 12:9 2 ಕೊರಿಂಥದವರಿಗೆ 12:9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- Isaiah 41:13–14 ಯೆಶಾಯ 41:13–14ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Psalm 63:8 ಕೀರ್ತನೆಗಳು 63:8ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
- 2 Chronicles 20:17 2 ಪೂರ್ವಕಾಲವೃತ್ತಾಂತ 20:17ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.