Isaiah · chapter 41 · verse 11
Isaiah 41:11 in Kannada
ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
Igo, ninage virodha vaagi urigondavarellaroo avamaanahondi, aashaabhangapaduvaru; ninna sangada vyaajyavaadida varu naashavaagi illade hoguvaru;
Isaiah 41:11 in English
- King James Version (KJV)
- Behold, all they that were incensed against thee shall be ashamed and confounded: they shall be as nothing; and they that strive with thee shall perish.
- World English Bible (WEB)
- Behold, all those who are incensed against you will be disappointed and confounded. Those who strive with you will be like nothing, and shall perish.
- American Standard Version (ASV)
- Behold, all they that are incensed against thee shall be put to shame and confounded: they that strive with thee shall be as nothing, and shall perish.
- Bible in Basic English (BBE)
- Truly, all those who are angry with you will be made low and put to shame: those desiring to do you wrong will come to nothing and never again be seen.
- Darby Translation (DBY)
- Lo, all that are incensed against thee shall be ashamed and confounded; they that strive with thee shall be as nothing, and shall perish.
- Webster's Bible (WBS)
- Behold, all [they that were] incensed against thee shall be ashamed and confounded: they shall be as nothing; and they that contend with thee shall perish.
- Young's Literal Translation (YLT)
- Lo, all those displeased with thee, They are ashamed and blush, They are as nothing, yea, perish Do the men who strive with thee.
Read in context
- 9ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
- 10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- 11ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
- 12ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.
- 13ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
Cross references
- Exodus 23:22 ವಿಮೋಚನಕಾಂಡ 23:22ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
- Isaiah 45:24 ಯೆಶಾಯ 45:24ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- Isaiah 54:17 ಯೆಶಾಯ 54:17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Acts 16:39 ಅಪೊಸ್ತಲರ ಕೃತ್ಯಗಳು 16:39ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
- Acts 13:8–11 ಅಪೊಸ್ತಲರ ಕೃತ್ಯಗಳು 13:8–11ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ). ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ-- ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ? ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
- Isaiah 49:26 ಯೆಶಾಯ 49:26ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Exodus 11:8 ವಿಮೋಚನಕಾಂಡ 11:8ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Isaiah 60:12–14 ಯೆಶಾಯ 60:12–14ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು. ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು. ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- Isaiah 41:29 ಯೆಶಾಯ 41:29ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
- Isaiah 29:8 ಯೆಶಾಯ 29:8ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.