Isaiah · chapter 41 · verse 16
Isaiah 41:16 in Kannada
ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
Neenu avugalannu tooralu gaaliyu avugalannu badidukondu hoguvadu, birugaaliyu chellaapilli maaduvadu; neenantoo kartanalli santoshisi, israayelina parishuddhanalli mahimehonduvi.
Isaiah 41:16 in English
- King James Version (KJV)
- Thou shalt fan them, and the wind shall carry them away, and the whirlwind shall scatter them: and thou shalt rejoice in the LORD, [and] shalt glory in the Holy One of Israel.
- World English Bible (WEB)
- You will winnow them, and the wind will carry them away, and the whirlwind will scatter them. You will rejoice in the LORD. You will glory in the Holy One of Israel.
- American Standard Version (ASV)
- Thou shalt winnow them, and the wind shall carry them away, and the whirlwind shall scatter them; and thou shalt rejoice in Jehovah, thou shalt glory in the Holy One of Israel.
- Bible in Basic English (BBE)
- You will send the wind over them, and it will take them away; they will go in all directions before the storm-wind: you will have joy in the Lord, and be glad in the Holy One of Israel.
- Darby Translation (DBY)
- thou shalt fan them, and the wind shall carry them away, and the whirlwind shall scatter them; and thou shalt rejoice in Jehovah, thou shalt glory in the Holy One of Israel.
- Webster's Bible (WBS)
- Thou shalt fan them, and the wind shall carry them away, and the whirlwind shall scatter them: and thou shalt rejoice in the LORD, [and] shalt glory in the Holy One of Israel.
- Young's Literal Translation (YLT)
- Thou winnowest them, and a wind lifteth them up, And a whirlwind scattereth them, And thou — thou rejoicest in Jehovah, In the Holy One of Israel dost boast thyself.
Read in context
- 14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- 15ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
- 16ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- 17ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
- 18ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
Cross references
- Jeremiah 51:2 ಯೆರೆಮೀಯ 51:2ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.
- Isaiah 45:24–25 ಯೆಶಾಯ 45:24–25ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು. ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Isaiah 61:10–11 ಯೆಶಾಯ 61:10–11ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು. ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Habakkuk 3:18 ಹಬಕ್ಕೂಕ 3:18ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Jeremiah 9:23–24 ಯೆರೆಮೀಯ 9:23–24ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ. ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- Jeremiah 15:7 ಯೆರೆಮೀಯ 15:7ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ
- Psalm 1:4 ಕೀರ್ತನೆಗಳು 1:4ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
- Luke 1:46–47 ಲೂಕನು 1:46–47ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ; ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- 1 Corinthians 1:30–31 1 ಕೊರಿಂಥದವರಿಗೆ 1:30–31ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು. ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- Isaiah 17:13 ಯೆಶಾಯ 17:13ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.