Isaiah · chapter 41 · verse 17
Isaiah 41:17 in Kannada
ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
Badavaroo daridraroo neerannu huduki kaanade baayaarikeyinda naalige onagidaaga kartanaada naane avarannu alaisuvenu, israayel deva raagiruva naanu avarannu kaibidenu.
Isaiah 41:17 in English
- King James Version (KJV)
- [When] the poor and needy seek water, and [there is] none, [and] their tongue faileth for thirst, I the LORD will hear them, I the God of Israel will not forsake them.
- World English Bible (WEB)
- The poor and needy seek water, and there is none. Their tongue fails for thirst. I, the LORD, will answer them. I, the God of Israel, will not forsake them.
- American Standard Version (ASV)
- The poor and needy seek water, and there is none, and their tongue faileth for thirst; I, Jehovah, will answer them, I, the God of Israel, will not forsake them.
- Bible in Basic English (BBE)
- The poor and crushed are looking for water where no water is, and their tongue is dry for need of it: I the Lord will give ear to their prayer, I the God of Israel will not give them up.
- Darby Translation (DBY)
- The afflicted and the needy seek water, and there is none; their tongue faileth for thirst: I, Jehovah, will answer them, [I], the God of Israel, will not forsake them.
- Webster's Bible (WBS)
- [When] the poor and needy seek water, and [there is] none, [and] their tongue faileth for thirst, I the LORD will hear them, [I] the God of Israel will not forsake them.
- Young's Literal Translation (YLT)
- The poor and the needy are seeking water, And there is none, Their tongue with thirst hath failed, I, Jehovah do answer them, The God of Israel — I forsake them not.
Read in context
- 15ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
- 16ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- 17ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
- 18ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
- 19ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
Cross references
- Isaiah 55:1 ಯೆಶಾಯ 55:1ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
- Isaiah 44:3 ಯೆಶಾಯ 44:3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
- Isaiah 30:19 ಯೆಶಾಯ 30:19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
- Matthew 5:6 ಮತ್ತಾಯನು 5:6ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Psalm 72:12–13 ಕೀರ್ತನೆಗಳು 72:12–13ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು.
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- John 4:10–15 ಯೋಹಾನನು 4:10–15ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು. ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು? ತಾನೂ ತನ್ನ ಮಕ್ಕಳೂ ತನ್ನ ದನಗಳೂ ಈ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು. ಯೇಸು ಪ್ರತ್ಯುತ್ತರವಾಗಿ ಆಕೆಗೆ--ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೆ ತಿರಿಗಿ ನೀರಡಿಕೆಯಾಗುವದು; ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು. ಆ ಸ್ತ್ರೀಯು ಆತನಿಗೆ--ಅಯ್ಯಾ, ನನಗೆ ನೀರಡಿಕೆಯಾಗದಂತೆಯೂ ನೀರು ಸೇದುವದಕ್ಕೆ ನಾನು ಇಲ್ಲಿಗೆ ಬಾರದಂತೆಯೂ ನನಗೆ ಈ ನೀರನ್ನು ಕೊಡು ಅಂದಳು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Hebrews 13:5–6 ಇಬ್ರಿಯರಿಗೆ 13:5–6ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ. ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- Genesis 28:15 ಆದಿಕಾಂಡ 28:15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.