Isaiah · chapter 41 · verse 29
Isaiah 41:29 in Kannada
ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
Igo, avarellaa vyarthave, avara kaaryagalu shoonyave. Avara kettida vigrahagalu gaali mattu galibiliye.
Isaiah 41:29 in English
- King James Version (KJV)
- Behold, they [are] all vanity; their works [are] nothing: their molten images [are] wind and confusion.
- World English Bible (WEB)
- Behold, all of their deeds are vanity and nothing. Their molten images are wind and confusion.
- American Standard Version (ASV)
- Behold, all of them, their works are vanity [and] nought; their molten images are wind and confusion.
- Bible in Basic English (BBE)
- Truly they are all nothing, their works are nothing and of no value: their metal images are of no more use than wind.
- Darby Translation (DBY)
- Behold, they are all vanity, their works are nought, their molten images are wind and emptiness.
- Webster's Bible (WBS)
- Behold, they [are] all vanity, their works [are] nothing: their molten images [are] wind and confusion.
- Young's Literal Translation (YLT)
- 'Lo, all of them [are] vanity, Nought [are] their works, Wind and emptiness their molten images!'
Read in context
- 27ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
- 28ನಾನು ನೋಡಿದಾಗ ಅಲ್ಲಿ ಯಾರೂ ಇಲ್ಲ; ನಾನು ಅವರನ್ನು ಕೇಳುವ ಪ್ರಶ್ನೆಗೆ ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
- 29ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
Cross references
- Jeremiah 5:13 ಯೆರೆಮೀಯ 5:13ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
- Isaiah 41:24 ಯೆಶಾಯ 41:24ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.
- Psalm 115:4–8 ಕೀರ್ತನೆಗಳು 115:4–8ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Habakkuk 2:18 ಹಬಕ್ಕೂಕ 2:18ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
- Isaiah 44:9–20 ಯೆಶಾಯ 44:9–20ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು. ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು? ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು. ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ. ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು. ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು. ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು; ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು; ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Psalm 135:15–18 ಕೀರ್ತನೆಗಳು 135:15–18ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ. ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ. ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ. ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Jeremiah 10:2–16 ಯೆರೆಮೀಯ 10:2–16ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ, ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ. ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ. ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ. ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ. ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ. ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು. ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು; ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ. ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ. ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು. ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.