Isaiah · chapter 41 · verse 7
Isaiah 41:7 in Kannada
ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
Haageye maragelasa davanu akkasaaliganannu protsaahagolisidanu, suttigeyinda samamaaduvavanu badigallina mele hodeyuvavanannu dhairyapadisidanu; besige chennaagide endu heli adu kadalada haage molegalinda jadidaru.
Isaiah 41:7 in English
- King James Version (KJV)
- So the carpenter encouraged the goldsmith, [and] he that smootheth [with] the hammer him that smote the anvil, saying, It [is] ready for the sodering: and he fastened it with nails, [that] it should not be moved.
- World English Bible (WEB)
- So the carpenter encourages the goldsmith. He who smooths with the hammer encourages him who strikes the anvil, saying of the soldering, “It is good;” and he fastens it with nails, that it might not totter.
- American Standard Version (ASV)
- So the carpenter encourageth the goldsmith, [and] he that smootheth with the hammer him that smiteth the anvil, saying of the soldering, It is good; and he fasteneth it with nails, that it should not be moved.
- Bible in Basic English (BBE)
- So the metal-worker put heart into the gold-worker, and he who was hammering the metal smooth said kind words to the iron-worker, saying of the plate, It is ready: and he put it together with nails, so that there might be no slipping.
- Darby Translation (DBY)
- And the artizan encouraged the founder, he that smootheth [with] the hammer him that smiteth on the anvil, saying of the soldering, It is good; and he fasteneth it with nails, that it be not moved.
- Webster's Bible (WBS)
- So the carpenter encouraged the goldsmith, [and] he that smootheth [with] the hammer him that smote the anvil, saying, It [is] ready for the sodering: and he fastened it with nails, [that] it should not be moved.
- Young's Literal Translation (YLT)
- And strengthen doth an artisan the refiner, A smoother [with] a hammer, Him who is beating [on] an anvil, Saying, 'For joining it [is] good,' And he strengtheneth it with nails, it is not moved!
Read in context
- 5ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.
- 6ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ.
- 7ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- 8ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
- 9ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
Cross references
- Isaiah 40:19–20 ಯೆಶಾಯ 40:19–20ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು. ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
- Daniel 3:1–7 ದಾನಿಯೇಲನು 3:1–7ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು. ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು. ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು. ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ-- ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು. ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು. ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
- Isaiah 46:6–7 ಯೆಶಾಯ 46:6–7ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು. ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
- Judges 18:17–18 ನ್ಯಾಯಸ್ಥಾಪಕರು 18:17–18ಆದರೆ ದೇಶವನ್ನು ಪಾಳತಿ ನೋಡಿ ಬಂದ ಆ ಐದು ಮಂದಿ ಹೋಗಿ ಒಳಗೆ ಹೊಕ್ಕು ಕೆತ್ತಿದ ವಿಗ್ರಹವನ್ನೂ ಏಫೋದನ್ನೂ ಪ್ರತಿಮೆ ಗಳನ್ನೂ ಎರಕದ ವಿಗ್ರಹವನ್ನೂ ತಕ್ಕೊಂಡರು. ಆಗ ಯಾಜಕನೂ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಪ್ರವೇಶ ದ್ವಾರದಲ್ಲಿ ನಿಂತಿದ್ದರು. ಅವರು ವಿಾಕನ ಮನಗೆ ಬಂದು ಏಫೋದನ್ನೂ ಪ್ರತಿಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ತಕ್ಕೊಂಡಾಗ ಯಾಜಕನು ಅವರಿಗೆ--ನೀವು ಏನು ಮಾಡುತ್ತೀರಿ ಅಂದನು.
- Judges 18:24 ನ್ಯಾಯಸ್ಥಾಪಕರು 18:24ಅವನು--ನಾನು ಮಾಡಿಕೊಂಡ ನನ್ನ ದೇವರು ಗಳನ್ನೂ ಯಾಜಕನನ್ನೂ ತಕ್ಕೊಂಡು ಹೋದಿರಿ; ಇನ್ನು ನನಗೆ ಏನದೆ? ನೀವು ನನ್ನನ್ನು--ನಿನಗೆ ಏನಾಯಿತೆಂದು ಕೇಳುವದೇನು? ಅಂದನು.
- Isaiah 44:12–15 ಯೆಶಾಯ 44:12–15ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ. ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು. ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು. ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು;
- Jeremiah 10:3–5 ಯೆರೆಮೀಯ 10:3–5ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ. ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
- Jeremiah 10:9 ಯೆರೆಮೀಯ 10:9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
Original words (Hebrew)
- carpenter · H2796חָרָשׁ chârâsh
- encouraged · H2388חָזַק châzaq
- goldsmith · H6884צָרַף tsâraph
- smootheth · H2505חָלַק châlaq
- hammer · H6360פַּטִּישׁ paṭṭîysh
- smote · H1986הָלַם hâlam
- anvil · H6471פַּעַם paʻam
- saying · H559אָמַר ʼâmar
- ready · H2896טוֹב ṭôwb
- sodering · H1694דֶּבֶק debeq
- fastened · H2388חָזַק châzaq
- nails · H4548מַסְמֵר maçmêr
- moved · H4131מוֹט môwṭ