Isaiah · chapter 42 · verse 19
Isaiah 42:19 in Kannada
ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು?
Nanna sevakanallade kurudanu yaaru? Illave naanu kaluhisida sevakanallade kivudanu yaaru? Sampoornanante kurudanu yaaru? Kartana sevakanante kurudanu yaaru?
Isaiah 42:19 in English
- King James Version (KJV)
- Who [is] blind, but my servant? or deaf, as my messenger [that] I sent? who [is] blind as [he that is] perfect, and blind as the LORD’s servant?
- World English Bible (WEB)
- Who is blind, but my servant? Or who is as deaf as my messenger whom I send? Who is as blind as he who is at peace, and as blind as the LORD’s servant?
- American Standard Version (ASV)
- Who is blind, but my servant? or deaf, as my messenger that I send? who is blind as he that is at peace [with me], and blind as Jehovah’s servant?
- Bible in Basic English (BBE)
- Who is blind, but my servant? who has his ears stopped, but he whom I send? who is blind as my true one, or who has his ears shut like the Lord's servant?
- Darby Translation (DBY)
- Who is blind, but my servant? and deaf, as my messenger whom I sent? Who is blind as he in whom I have trusted, and blind as Jehovah's servant,
- Webster's Bible (WBS)
- Who [is] blind, but my servant? or deaf, as my messenger [that] I sent? who [is] blind as [he that is] perfect, and blind as the LORD'S servant?
- Young's Literal Translation (YLT)
- Who [is] blind but My servant? And deaf as My messenger I send? Who [is] blind as he who is at peace, Yea, blind, as the servant of Jehovah?
Read in context
- 17ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.
- 18ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.
- 19ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು?
- 20ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
- 21ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
Cross references
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Ezekiel 12:2 ಯೆಹೆಜ್ಕೇಲನು 12:2ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು.
- Jeremiah 5:21 ಯೆರೆಮೀಯ 5:21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
- Matthew 23:16–24 ಮತ್ತಾಯನು 23:16–24ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
- Isaiah 6:9 ಯೆಶಾಯ 6:9ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
- John 9:41 ಯೋಹಾನನು 9:41ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
- Isaiah 44:26 ಯೆಶಾಯ 44:26ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
- Matthew 15:14–16 ಮತ್ತಾಯನು 15:14–16ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು. ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು. ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?
- John 9:39 ಯೋಹಾನನು 9:39ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
- Isaiah 56:10 ಯೆಶಾಯ 56:10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
- 2 Corinthians 3:14–15 2 ಕೊರಿಂಥದವರಿಗೆ 3:14–15ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ. ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.
- Romans 11:7–10 ರೋಮಾಪುರದವರಿಗೆ 11:7–10ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು. (ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ. ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ. ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.