Isaiah · chapter 42 · verse 21
Isaiah 42:21 in Kannada
ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
Kartanu aatana neetigoskara bahalavaagi mechchuvanu, aatanu nyaayapramaanavannu hechchisi ghanapadisuvanu.
Isaiah 42:21 in English
- King James Version (KJV)
- The LORD is well pleased for his righteousness’ sake; he will magnify the law, and make [it] honourable.
- World English Bible (WEB)
- It pleased the LORD, for his righteousness’ sake, to magnify the law and make it honorable.
- American Standard Version (ASV)
- It pleased Jehovah, for his righteousness’ sake, to magnify the law, and make it honorable.
- Bible in Basic English (BBE)
- It was the Lord's pleasure, because of his righteousness, to make the teaching great and give it honour.
- Darby Translation (DBY)
- Jehovah had delight [in him] for his righteousness' sake: he hath magnified the law, and made it honourable.
- Webster's Bible (WBS)
- The LORD is well pleased for his righteousness' sake; he will magnify the law, and make [it] honorable.
- Young's Literal Translation (YLT)
- Jehovah hath delight for the sake of His righteousness, He magnifieth law, and maketh honourable.
Read in context
- 19ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು?
- 20ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
- 21ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
- 22ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
- 23ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಕೊಡುವರು, ಯಾರು ಇನ್ನು ಮುಂದೆ ಆಲಿಸಿ ಕೇಳುವರು?
Cross references
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Romans 3:31 ರೋಮಾಪುರದವರಿಗೆ 3:31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Romans 7:12 ರೋಮಾಪುರದವರಿಗೆ 7:12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
- Matthew 5:17–20 ಮತ್ತಾಯನು 5:17–20ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು. ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು. ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
- Isaiah 1:24–27 ಯೆಶಾಯ 1:24–27ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು. ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು. ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ. ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
- Psalm 71:19 ಕೀರ್ತನೆಗಳು 71:19ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
- Isaiah 42:4 ಯೆಶಾಯ 42:4ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
- Isaiah 46:12–13 ಯೆಶಾಯ 46:12–13ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ;ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು. ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
- Matthew 3:15 ಮತ್ತಾಯನು 3:15ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
- Psalm 40:8 ಕೀರ್ತನೆಗಳು 40:8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- Romans 3:25–26 ರೋಮಾಪುರದವರಿಗೆ 3:25–26ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- Psalm 85:9–12 ಕೀರ್ತನೆಗಳು 85:9–12ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ. ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ. ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.