Isaiah · chapter 42 · verse 23
Isaiah 42:23 in Kannada
ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಕೊಡುವರು, ಯಾರು ಇನ್ನು ಮುಂದೆ ಆಲಿಸಿ ಕೇಳುವರು?
Nimmalli yaaru ivugalige kivikoduvaru, yaaru innu munde aalisi keluvaru?
Isaiah 42:23 in English
- King James Version (KJV)
- Who among you will give ear to this? [who] will hearken and hear for the time to come?
- World English Bible (WEB)
- Who is there among you who will give ear to this? Who will listen and hear for the time to come?
- American Standard Version (ASV)
- Who is there among you that will give ear to this? that will hearken and hear for the time to come?
- Bible in Basic English (BBE)
- Who is there among you who will give ear to this? who will give attention to it for the time to come?
- Darby Translation (DBY)
- Who among you will give ear to this, [who] will hearken and hear what is to come?
- Webster's Bible (WBS)
- Who among you will give ear to this? [who] will hearken, and hear for the time to come?
- Young's Literal Translation (YLT)
- Who among you giveth ear [to] this? Attendeth, and heareth afterwards.
Read in context
- 21ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
- 22ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
- 23ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಕೊಡುವರು, ಯಾರು ಇನ್ನು ಮುಂದೆ ಆಲಿಸಿ ಕೇಳುವರು?
- 24ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
- 25ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
Cross references
- Isaiah 48:18 ಯೆಶಾಯ 48:18ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
- Acts 3:22–23 ಅಪೊಸ್ತಲರ ಕೃತ್ಯಗಳು 3:22–23ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು; ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
- Deuteronomy 4:29–31 ಧರ್ಮೋಪದೇಶಕಾಂಡ 4:29–31ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Micah 6:9 ಮೀಕ 6:9ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
- Leviticus 26:40–42 ಯಾಜಕಕಾಂಡ 26:40–42ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
- Matthew 21:28–31 ಮತ್ತಾಯನು 21:28–31ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
- 1 Peter 4:2–3 1 ಪೇತ್ರನು 4:2–3ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- Acts 3:19 ಅಪೊಸ್ತಲರ ಕೃತ್ಯಗಳು 3:19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- Jeremiah 3:13 ಯೆರೆಮೀಯ 3:13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Jeremiah 3:4–7 ಯೆರೆಮೀಯ 3:4–7ಈಗಿನಿಂದಲೇ ನನಗೆ --ನನ್ನ ತಂದೆಯೇ, ನನ್ನ ಯೌವನದ ಮಾರ್ಗ ದರ್ಶಕನು ನೀನೇ ಎಂದು ನೀನು ಕೂಗುವದಿಲ್ಲವೋ? ಆತನು ಎಂದೆಂದಿಗೂ ತನ್ನ ಕೋಪವನ್ನು ಕಾದಿರಿಸಿ ಕೊಂಡಿರುವನೋ? ಇಗೋ, ನೀನು ಅಪೇಕ್ಷಿಸಿದ ಹಾಗೆ ಮಾತನಾಡಿದ್ದೀ ಮತ್ತು ಕೆಟ್ಟವುಗಳನ್ನು ನಡಿಸಿದ್ದೀ. ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ. ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.
- Isaiah 1:18–20 ಯೆಶಾಯ 1:18–20ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ; ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.