Isaiah · chapter 42 · verse 25
Isaiah 42:25 in Kannada
ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
Aadadarinda aatanu tanna yuddada raudravannu mattu roshaagniyannu avana mele surisidanu. Adu avana suttaloo uriyu hattidaroo avanige tiliyalilla; adu avanannu suttaroo avanu manassige tandukollalilla.
Isaiah 42:25 in English
- King James Version (KJV)
- Therefore he hath poured upon him the fury of his anger, and the strength of battle: and it hath set him on fire round about, yet he knew not; and it burned him, yet he laid [it] not to heart.
- World English Bible (WEB)
- Therefore he poured the fierceness of his anger on him, and the strength of battle. It set him on fire all around, but he didn’t know. It burned him, but he didn’t take it to heart.”
- American Standard Version (ASV)
- Therefore he poured upon him the fierceness of his anger, and the strength of battle; and it set him on fire round about, yet he knew not; and it burned him, yet he laid it not to heart.
- Bible in Basic English (BBE)
- For this reason he let loose on him the heat of his wrath, and his strength was like a flame; and it put fire round about him, but he did not see it; he was burned, but did not take it to heart.
- Darby Translation (DBY)
- And he hath poured upon him the fury of his anger, and the strength of battle: and it set him on fire round about, yet he knew not; and it burned him, yet he took it not to heart.
- Webster's Bible (WBS)
- Therefore he hath poured upon him the fury of his anger, and the strength of battle: and it hath set him on fire around, yet he knew not; and it burned him, yet he laid [it] not to heart.
- Young's Literal Translation (YLT)
- And He poureth on him fury, His anger, and the strength of battle, And it setteth him on fire round about, And he hath not known, And it burneth against him, and he layeth it not to heart!
Read in context
- 23ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಕೊಡುವರು, ಯಾರು ಇನ್ನು ಮುಂದೆ ಆಲಿಸಿ ಕೇಳುವರು?
- 24ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
- 25ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
Cross references
- Hosea 7:9 ಹೋಶೇಯ 7:9ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.
- Isaiah 57:11 ಯೆಶಾಯ 57:11ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
- Ezekiel 7:8–9 ಯೆಹೆಜ್ಕೇಲನು 7:8–9ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
- Malachi 2:2 ಮಲಾಕಿಯ 2:2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
- Leviticus 26:15–46 ಯಾಜಕಕಾಂಡ 26:15–46ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು. ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ. ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು. ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು. ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು. ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು. ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ. ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ. ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು. ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ. ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು. ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು. ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು. ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು. ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು. ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು. ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು. ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು. ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ. ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ. ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ. ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- Psalm 79:5–6 ಕೀರ್ತನೆಗಳು 79:5–6ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ? ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
- Isaiah 9:13 ಯೆಶಾಯ 9:13ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
- Revelation 16:1–21 ಪ್ರಕಟನೆ 16:1–21ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು. ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು. ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು. ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು. ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು. ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು. ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು. ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು. ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು. ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು. ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು. ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು. ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು. ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ. ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು. ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು. ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Revelation 9:18–21 ಪ್ರಕಟನೆ 9:18–21ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು. ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ. ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ. ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
- Ezekiel 20:34 ಯೆಹೆಜ್ಕೇಲನು 20:34ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,