Isaiah · chapter 42 · verse 5
Isaiah 42:5 in Kannada
ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
Aakaashavannu nirmisi haasidavanu bhoomiyannu adarinda utpatti yannoo vistarisi, adara meliruva janarige shvaasavannoo sancharisuvavarige aatmavannu kodu ttenendu devaraada kartanu heluttaane--
Isaiah 42:5 in English
- King James Version (KJV)
- Thus saith God the LORD, he that created the heavens, and stretched them out; he that spread forth the earth, and that which cometh out of it; he that giveth breath unto the people upon it, and spirit to them that walk therein:
- World English Bible (WEB)
- God the LORD, he who created the heavens and stretched them out, he who spread out the earth and that which comes out of it, he who gives breath to its people and spirit to those who walk in it, says:
- American Standard Version (ASV)
- Thus saith God Jehovah, he that created the heavens, and stretched them forth; he that spread abroad the earth and that which cometh out of it; he that giveth breath unto the people upon it, and spirit to them that walk therein:
- Bible in Basic English (BBE)
- God the Lord, even he who made the heavens, measuring them out on high; stretching out the earth, and giving its produce; he who gives breath to the people on it, and life to those who go about on it, says:
- Darby Translation (DBY)
- Thus saith God, Jehovah, he that created the heavens and stretched them out, he that spread forth the earth and its productions, he that giveth breath unto the people upon it, and spirit to them that walk therein:
- Webster's Bible (WBS)
- Thus saith God the LORD, he that created the heavens, and expanded them; he that spread forth the earth, and that which it produceth; he that giveth breath to the people upon it, and spirit to them that walk therein.
- Young's Literal Translation (YLT)
- Thus said God, Jehovah, preparing The heavens, and stretching them out, Spreading out the earth and its productions, Giving breath to the people on it, And spirit to those walking in it.
Read in context
- 3ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
- 4ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
- 5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
- 6ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
- 7ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
Cross references
- Isaiah 40:22 ಯೆಶಾಯ 40:22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- Isaiah 45:12 ಯೆಶಾಯ 45:12ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
- Jeremiah 10:12 ಯೆರೆಮೀಯ 10:12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- Zechariah 12:1 ಜೆಕರ್ಯ 12:1ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
- Isaiah 48:13 ಯೆಶಾಯ 48:13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
- Psalm 104:2–35 ಕೀರ್ತನೆಗಳು 104:2–35ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ. ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ. ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ. ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು. ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು. ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು. ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು. ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ. ಬುಗ್ಗೆ ಗಳನ್ನು ಹಳ್ಳಗಳಿಗೆ ಕಳುಹಿಸುತ್ತೀ; ಅವು ಬೆಟ್ಟಗಳ ನಡುವೆ ಹರಿಯುತ್ತವೆ; ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ. ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ. ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ. ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ. ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ. ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ. ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ. ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ. ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ. ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ. ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ. ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ. ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ. ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ. ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ. ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ. ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ. ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ. ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ. ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ. ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ. ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ. ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು. ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ. ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
- Isaiah 44:24 ಯೆಶಾಯ 44:24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
- Psalm 102:25–26 ಕೀರ್ತನೆಗಳು 102:25–26ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
- Hebrews 1:10–12 ಇಬ್ರಿಯರಿಗೆ 1:10–12ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ. ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು; ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Isaiah 45:18 ಯೆಶಾಯ 45:18ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
Original words (Hebrew)
- saith · H559אָמַר ʼâmar
- God · H410אֵל ʼêl
- created · H1254בָּרָא bârâʼ
- heavens · H8064שָׁמַיִם shâmayim
- out · H5186נָטָה nâṭâh
- forth · H7554רָקַע râqaʻ
- earth · H776אֶרֶץ ʼerets
- out · H6631צֶאֱצָא tseʼĕtsâʼ
- giveth · H5414נָתַן nâthan
- breath · H5397נְשָׁמָה nᵉshâmâh
- people · H5971עַם ʻam
- spirit · H7307רוּחַ rûwach
- walk · H1980הָלַךְ hâlak