Isaiah · chapter 42 · verse 9
Isaiah 42:9 in Kannada
ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
Igo, hindinavugalu neraverive. Hosa sangatigalannu prakatisuttene; avu huttuvadakkinta muncheye naanu avugalannu nimage tilisuttene.
Isaiah 42:9 in English
- King James Version (KJV)
- Behold, the former things are come to pass, and new things do I declare: before they spring forth I tell you of them.
- World English Bible (WEB)
- Behold, the former things have happened and I declare new things. I tell you about them before they come up.”
- American Standard Version (ASV)
- Behold, the former things are come to pass, and new things do I declare; before they spring forth I tell you of them.
- Bible in Basic English (BBE)
- See, the things said before have come about, and now I give word of new things: before they come I give you news of them.
- Darby Translation (DBY)
- Behold, the former things are come to pass, and new things do I declare: before they spring forth will I cause you to hear them.
- Webster's Bible (WBS)
- Behold, the former things have come to pass, and new things do I declare: before they spring forth I tell you of them.
- Young's Literal Translation (YLT)
- The former things, lo, have come, And new things I am declaring, Before they spring up I cause you to hear.
Read in context
- 7ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- 8ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
- 9ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
- 10ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
- 11ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
Cross references
- Isaiah 43:19 ಯೆಶಾಯ 43:19ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
- Isaiah 46:9–10 ಯೆಶಾಯ 46:9–10ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ. ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- John 13:19 ಯೋಹಾನನು 13:19ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
- 2 Peter 1:19–21 2 ಪೇತ್ರನು 1:19–21ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು. ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು. ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Isaiah 44:7–8 ಯೆಶಾಯ 44:7–8ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ. ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
- Joshua 23:14–15 ಯೆಹೋಶುವ 23:14–15ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು. ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- Isaiah 41:22–23 ಯೆಶಾಯ 41:22–23ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು. ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
- 1 Kings 8:15–20 1 ಅರಸುಗಳು 8:15–20ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ-- ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು. ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು. ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ. ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು. ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
- Joshua 21:45 ಯೆಹೋಶುವ 21:45ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
- 1 Peter 1:10–12 1 ಪೇತ್ರನು 1:10–12ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು. ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- Genesis 15:12–16 ಆದಿಕಾಂಡ 15:12–16ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು. ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು. ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು. ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ. ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
- 1 Kings 11:36 1 ಅರಸುಗಳು 11:36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.