Isaiah · chapter 43 · verse 14
Isaiah 43:14 in Kannada
ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
Nimma vimochakanoo israayelina pari shuddhanoo aagiruva kartanu intennuttaane--naanu nimagoskara baabelige kaluhisi avara ghana vantarannellaa mattu hadagugalalli aarbhatisuva kasdeeyarannu taggisidenu.
Isaiah 43:14 in English
- King James Version (KJV)
- Thus saith the LORD, your redeemer, the Holy One of Israel; For your sake I have sent to Babylon, and have brought down all their nobles, and the Chaldeans, whose cry [is] in the ships.
- World English Bible (WEB)
- The LORD, your Redeemer, the Holy One of Israel says: “For your sake, I have sent to Babylon, and I will bring all of them down as fugitives, even the Chaldeans, in the ships of their rejoicing.
- American Standard Version (ASV)
- Thus saith Jehovah, your Redeemer, the Holy One of Israel: For your sake I have sent to Babylon, and I will bring down all of them as fugitives, even the Chaldeans, in the ships of their rejoicing.
- Bible in Basic English (BBE)
- The Lord, who has taken up your cause, the Holy One of Israel, says, Because of you I have sent to Babylon, and made all their seers come south, and the Chaldaeans whose cry is in the ships.
- Darby Translation (DBY)
- Thus saith Jehovah, your Redeemer, the Holy One of Israel: For your sake I have sent to Babylon, and have brought all of them down as fugitives, even the Chaldeans, whose cry is in the ships.
- Webster's Bible (WBS)
- Thus saith the LORD, your Redeemer, the Holy One of Israel; For your sake I have sent to Babylon, and have brought down all their nobles, and the Chaldeans, whose cry [is] in the ships.
- Young's Literal Translation (YLT)
- Thus said Jehovah, your Redeemer, The Holy One of Israel: 'For your sake I have sent to Babylon, And caused bars to descend — all of them, And the Chaldeans, whose song [is] in the ships.
Read in context
- 12ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.
- 13ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
- 14ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
- 15ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.
- 16ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.
Cross references
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- Isaiah 23:13 ಯೆಶಾಯ 23:13ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.
- Jeremiah 51:24 ಯೆರೆಮೀಯ 51:24ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
- Ezekiel 27:29–36 ಯೆಹೆಜ್ಕೇಲನು 27:29–36ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು, ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ; ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು. ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು? ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ. ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು. ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ. ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Isaiah 54:5–8 ಯೆಶಾಯ 54:5–8ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು. ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ. ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
- Psalm 19:14 ಕೀರ್ತನೆಗಳು 19:14ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- Jeremiah 50:2–11 ಯೆರೆಮೀಯ 50:2–11ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ; ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ. ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು. ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು. ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು. ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ. ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು. ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ. ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Jeremiah 51:34–37 ಯೆರೆಮೀಯ 51:34–37ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ. ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ; ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.
- Isaiah 43:1 ಯೆಶಾಯ 43:1ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
- Jeremiah 50:27–34 ಯೆರೆಮೀಯ 50:27–34ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು. ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು! ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು. ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ. ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು. ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು. ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
Original words (Hebrew)
- saith · H559אָמַר ʼâmar
- redeemer · H1350גָּאַל gâʼal
- One · H6918קָדוֹשׁ qâdôwsh
- Israel · H3478יִשְׂרָאֵל Yisrâʼêl
- sent · H7971שָׁלַח shâlach
- Babylon · H894בָּבֶל Bâbel
- down · H3381יָרַד yârad
- nobles · H1281בָּרִיחַ bârîyach
- Chaldeans · H3778כַּשְׂדִּי Kasdîy
- cry · H7440רִנָּה rinnâh
- ships · H591אֳנִיָּה ʼŏnîyâh