Isaiah · chapter 43 · verse 15
Isaiah 43:15 in Kannada
ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.
Naanu kartanaada nimma parishuddanoo israayelannu srushtisidavanoo nimma arasanoo aagiddene.
Isaiah 43:15 in English
- King James Version (KJV)
- I [am] the LORD, your Holy One, the creator of Israel, your King.
- World English Bible (WEB)
- I am the LORD, your Holy One, the Creator of Israel, your King.”
- American Standard Version (ASV)
- I am Jehovah, your Holy One, the Creator of Israel, your King.
- Bible in Basic English (BBE)
- I am the Lord, your Holy One, the Maker of Israel, your King.
- Darby Translation (DBY)
- I [am] Jehovah, your Holy One, the Creator of Israel, your King.
- Webster's Bible (WBS)
- I [am] the LORD, your Holy One, the Creator of Israel, your King.
- Young's Literal Translation (YLT)
- I [am] Jehovah, your Holy One, Creator of Israel, your King.'
Read in context
- 13ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
- 14ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
- 15ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.
- 16ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.
- 17ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--
Cross references
- Habakkuk 1:12 ಹಬಕ್ಕೂಕ 1:12ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
- Isaiah 48:17 ಯೆಶಾಯ 48:17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- Revelation 3:7 ಪ್ರಕಟನೆ 3:7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
- Psalm 74:12 ಕೀರ್ತನೆಗಳು 74:12ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ.
- Isaiah 43:1 ಯೆಶಾಯ 43:1ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
- Jeremiah 51:5 ಯೆರೆಮೀಯ 51:5ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
- Isaiah 33:22 ಯೆಶಾಯ 33:22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- Isaiah 43:3 ಯೆಶಾಯ 43:3ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
- Isaiah 41:14 ಯೆಶಾಯ 41:14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Isaiah 41:16 ಯೆಶಾಯ 41:16ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Isaiah 30:11 ಯೆಶಾಯ 30:11ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.