Isaiah · chapter 43 · verse 17
Isaiah 43:17 in Kannada
ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--
Yaavaatanu ratha kudure gala dandannu paraakramaraadavarannu horadisi avu ottige biddu elalaaradanteyoo deepado paadiyalli nandi aarihoguvanteyoo maadi dano aa kartanu intennuttaane--
Isaiah 43:17 in English
- King James Version (KJV)
- Which bringeth forth the chariot and horse, the army and the power; they shall lie down together, they shall not rise: they are extinct, they are quenched as tow.
- World English Bible (WEB)
- who brings out the chariot and horse, the army and the mighty man (they lie down together, they shall not rise; they are extinct, they are quenched like a wick) says:
- American Standard Version (ASV)
- who bringeth forth the chariot and horse, the army and the mighty man (they lie down together, they shall not rise; they are extinct, they are quenched as a wick):
- Bible in Basic English (BBE)
- Who sends out the war-carriages and the horses, the army with all its force; they have come down, they will not get up again; like a feebly burning light they are put out.
- Darby Translation (DBY)
- who bringeth forth chariot and horse, army and power — they lie down together, they shall not rise; they are extinct, they are quenched as tow:
- Webster's Bible (WBS)
- Who bringeth forth the chariot and horse, the army and the power; they shall lie down together, they shall not rise: they are extinct, they are quenched as tow.
- Young's Literal Translation (YLT)
- Who is bringing forth chariot and horse, A force, even a strong one: 'Together they lie down — they rise not, They have been extinguished, As flax they have been quenched.'
Read in context
- 15ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.
- 16ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.
- 17ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--
- 18ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ.
- 19ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
Cross references
- Isaiah 1:31 ಯೆಶಾಯ 1:31ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
- Exodus 14:4–9 ವಿಮೋಚನಕಾಂಡ 14:4–9ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು. ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು. ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು. ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು. ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು. ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
- Psalm 118:12 ಕೀರ್ತನೆಗಳು 118:12ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
- Psalm 76:5–6 ಕೀರ್ತನೆಗಳು 76:5–6ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ. ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
- Revelation 20:8–9 ಪ್ರಕಟನೆ 20:8–9ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು. ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
- Ezekiel 38:8–18 ಯೆಹೆಜ್ಕೇಲನು 38:8–18ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ. ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ, ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ, ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ. ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು. ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ. ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ? ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 14:20–22 ಯೆಶಾಯ 14:20–22ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ. ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Revelation 19:17–21 ಪ್ರಕಟನೆ 19:17–21ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Exodus 14:23–28 ವಿಮೋಚನಕಾಂಡ 14:23–28ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು. ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು. ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು. ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
- Psalm 46:8–9 ಕೀರ್ತನೆಗಳು 46:8–9ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ; ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
- Exodus 15:4 ವಿಮೋಚನಕಾಂಡ 15:4ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.