Isaiah · chapter 43 · verse 21
Isaiah 43:21 in Kannada
ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
Nanna stotravannu prachurapadisali endu naanu ee janarannu nanagoskara roopisiddene.
Isaiah 43:21 in English
- King James Version (KJV)
- This people have I formed for myself; they shall shew forth my praise.
- World English Bible (WEB)
- the people which I formed for myself, that they might declare my praise.
- American Standard Version (ASV)
- the people which I formed for myself, that they might set forth my praise.
- Bible in Basic English (BBE)
- Even the people whom I made to be the witnesses of my praise.
- Darby Translation (DBY)
- This people have I formed for myself: they shall shew forth my praise.
- Webster's Bible (WBS)
- This people have I formed for myself; they shall show forth my praise.
- Young's Literal Translation (YLT)
- This people I have formed for Myself, My praise they recount.
Read in context
- 19ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
- 20ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
- 21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
- 22ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!
- 23ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
Cross references
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- Psalm 102:18 ಕೀರ್ತನೆಗಳು 102:18ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು.
- 1 Corinthians 6:19–20 1 ಕೊರಿಂಥದವರಿಗೆ 6:19–20ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ. ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Luke 1:74–75 ಲೂಕನು 1:74–75ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Isaiah 60:21 ಯೆಶಾಯ 60:21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Ephesians 1:5–12 ಎಫೆಸದವರಿಗೆ 1:5–12ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ. ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ. ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು. ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು. ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು. ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
- Colossians 1:16 ಕೊಲೊಸ್ಸೆಯವರಿಗೆ 1:16ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
- Ephesians 3:21 ಎಫೆಸದವರಿಗೆ 3:21ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Psalm 4:3 ಕೀರ್ತನೆಗಳು 4:3ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.