Isaiah · chapter 43 · verse 23
Isaiah 43:23 in Kannada
ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
Ninna dahanabaliya ele karugalannu nanage taralilla illave ninna yajnya galinda nannannu sanmaanisalilla; neenu kaanikeyannu arpisade iddaddakke naanu kaaranavalla, illave dhoopakkaagi ninnannu besaragolisalilla.
Isaiah 43:23 in English
- King James Version (KJV)
- Thou hast not brought me the small cattle of thy burnt offerings; neither hast thou honoured me with thy sacrifices. I have not caused thee to serve with an offering, nor wearied thee with incense.
- World English Bible (WEB)
- You have not brought me any of your sheep for burnt offerings, neither have you honored me with your sacrifices. I have not burdened you with offerings, nor wearied you with frankincense.
- American Standard Version (ASV)
- Thou hast not brought me of thy sheep for burnt-offerings; neither hast thou honored me with thy sacrifices. I have not burdened thee with offerings, nor wearied thee with frankincense.
- Bible in Basic English (BBE)
- You have not made me burned offerings of sheep, or given me honour with your offerings of beasts; I did not make you servants to give me an offering, and I did not make you tired with requests for perfumes.
- Darby Translation (DBY)
- thou hast not brought me the small cattle of thy burnt-offerings, neither hast thou glorified me with thy sacrifices. I have not caused thee to toil with an oblation, nor wearied thee with incense.
- Webster's Bible (WBS)
- Thou hast not brought me the small cattle of thy burnt-offerings; neither hast thou honored me with thy sacrifices. I have not caused thee to serve with an offering, nor wearied thee with incense.
- Young's Literal Translation (YLT)
- Thou hast not brought in to Me, The lamb of thy burnt-offerings, And [with] thy sacrifices thou hast not honoured Me, I have not caused thee to serve with a present, Nor wearied thee with frankincense.
Read in context
- 21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
- 22ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!
- 23ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
- 24ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
- 25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
Cross references
- Amos 5:25 ಆಮೋಸ 5:25ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?
- Zechariah 7:5–6 ಜೆಕರ್ಯ 7:5–6ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ? ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Proverbs 21:27 ಜ್ಞಾನೋಕ್ತಿಗಳು 21:27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Malachi 1:13–14 ಮಲಾಕಿಯ 1:13–14ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Malachi 1:6–8 ಮಲಾಕಿಯ 1:6–8ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ. ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ. ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
- Leviticus 2:1 ಯಾಜಕಕಾಂಡ 2:1ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
- Amos 5:21–22 ಆಮೋಸ 5:21–22ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ. ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
- Jeremiah 7:22 ಯೆರೆಮೀಯ 7:22ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
- Malachi 3:8 ಮಲಾಕಿಯ 3:8ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
- Matthew 11:30 ಮತ್ತಾಯನು 11:30ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.