Isaiah · chapter 43 · verse 25
Isaiah 43:25 in Kannada
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
Naanaagi naane nanagoskara ninna drohagalannu alisibiduttene. Ninna paapa galannu nanna nenapinallidenu.
Isaiah 43:25 in English
- King James Version (KJV)
- I, [even] I, [am] he that blotteth out thy transgressions for mine own sake, and will not remember thy sins.
- World English Bible (WEB)
- I, even I, am he who blots out your transgressions for my own sake; and I will not remember your sins.
- American Standard Version (ASV)
- I, even I, am he that blotteth out thy transgressions for mine own sake; and I will not remember thy sins.
- Bible in Basic English (BBE)
- I, even I, am he who takes away your sins; and I will no longer keep your evil doings in mind.
- Darby Translation (DBY)
- — I, I [am] He that blotteth out thy transgressions for mine own sake, and I will not remember thy sins.
- Webster's Bible (WBS)
- I, [even] I, [am] he that blotteth out thy transgressions for my own sake, and will not remember thy sins.
- Young's Literal Translation (YLT)
- I — I [am] He who is blotting out Thy transgressions for Mine own sake, And thy sins I do not remember.
Read in context
- 23ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
- 24ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
- 25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- 26ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
- 27ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
Cross references
- Hebrews 8:12 ಇಬ್ರಿಯರಿಗೆ 8:12ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Micah 7:18–19 ಮೀಕ 7:18–19ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Hebrews 10:17 ಇಬ್ರಿಯರಿಗೆ 10:17ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Jeremiah 31:34 ಯೆರೆಮೀಯ 31:34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Isaiah 44:22 ಯೆಶಾಯ 44:22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- Psalm 25:7 ಕೀರ್ತನೆಗಳು 25:7ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
- Psalm 79:8–9 ಕೀರ್ತನೆಗಳು 79:8–9ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ. ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
- Isaiah 38:17 ಯೆಶಾಯ 38:17ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
- Acts 3:19 ಅಪೊಸ್ತಲರ ಕೃತ್ಯಗಳು 3:19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- Romans 5:20 ರೋಮಾಪುರದವರಿಗೆ 5:20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Isaiah 43:11 ಯೆಶಾಯ 43:11ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.