Isaiah · chapter 43 · verse 27
Isaiah 43:27 in Kannada
ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
Ninna moolapitru paapa maadiddaane, bodhakaru nanage virodhavaagi drohamaadiddaare.aadakaarana parishuddha sthaanada pradhaanarannu apavitramaadi, yaako bannu shaapakkoo, israayelannu dooshanegaligoo oppisibittiddene.
Isaiah 43:27 in English
- King James Version (KJV)
- Thy first father hath sinned, and thy teachers have transgressed against me.
- World English Bible (WEB)
- Your first father sinned, and your teachers have transgressed against me.
- American Standard Version (ASV)
- Thy first father sinned, and thy teachers have transgressed against me.
- Bible in Basic English (BBE)
- Your first father was a sinner, and your guides have gone against my word.
- Darby Translation (DBY)
- Thy first father hath sinned, and thy mediators have rebelled against me.
- Webster's Bible (WBS)
- Thy first father hath sinned, and thy teachers have transgressed against me.
- Young's Literal Translation (YLT)
- Thy first father sinned, And thine interpreters transgressed against me,
Read in context
- 25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- 26ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
- 27ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
- 28ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
Cross references
- Isaiah 28:7 ಯೆಶಾಯ 28:7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Ezekiel 22:25–28 ಯೆಹೆಜ್ಕೇಲನು 22:25–28ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ. ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು. ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ. ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
- Ezekiel 16:3 ಯೆಹೆಜ್ಕೇಲನು 16:3ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
- Lamentations 4:13–14 ಪ್ರಲಾಪಗಳು 4:13–14ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು. ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
- Malachi 3:7 ಮಲಾಕಿಯ 3:7ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ.
- Isaiah 3:12 ಯೆಶಾಯ 3:12ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
- Jeremiah 23:11–15 ಯೆರೆಮೀಯ 23:11–15ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ. ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ. ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ. ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
- Acts 5:17–18 ಅಪೊಸ್ತಲರ ಕೃತ್ಯಗಳು 5:17–18ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Romans 5:12 ರೋಮಾಪುರದವರಿಗೆ 5:12ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
- Jeremiah 3:25 ಯೆರೆಮೀಯ 3:25ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.