Isaiah · chapter 43 · verse 5
Isaiah 43:5 in Kannada
ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
Bhayapadabeda; naane ninnondige iddene; ninna santatiyavarannu moodanadinda taruvenu; pashchimadinda ninnannu koodisuvenu.
Isaiah 43:5 in English
- King James Version (KJV)
- Fear not: for I [am] with thee: I will bring thy seed from the east, and gather thee from the west;
- World English Bible (WEB)
- Don’t be afraid, for I am with you. I will bring your offspring from the east, and gather you from the west.
- American Standard Version (ASV)
- Fear not; for I am with thee: I will bring thy seed from the east, and gather thee from the west;
- Bible in Basic English (BBE)
- Have no fear, for I am with you: I will take your seed from the east, and get you together from the west;
- Darby Translation (DBY)
- Fear not, for I [am] with thee: I will bring thy seed from the east, and gather thee from the west;
- Webster's Bible (WBS)
- Fear not: for I [am] with thee: I will bring thy seed from the east, and gather thee from the west;
- Young's Literal Translation (YLT)
- Be not afraid, for I [am] with thee, From the east I bring in thy seed, And from the west I gather thee.
Read in context
- 3ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
- 4ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.
- 5ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
- 6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- 7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
Cross references
- Deuteronomy 30:3 ಧರ್ಮೋಪದೇಶಕಾಂಡ 30:3ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
- Luke 13:29 ಲೂಕನು 13:29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
- Isaiah 49:12 ಯೆಶಾಯ 49:12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
- Ezekiel 39:25–29 ಯೆಹೆಜ್ಕೇಲನು 39:25–29ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು. ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ, ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು; ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 60:1–11 ಯೆಶಾಯ 60:1–11ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
- Isaiah 44:2 ಯೆಶಾಯ 44:2ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
- Acts 18:9–10 ಅಪೊಸ್ತಲರ ಕೃತ್ಯಗಳು 18:9–10ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- Ezekiel 36:24–27 ಯೆಹೆಜ್ಕೇಲನು 36:24–27ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು. ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Jeremiah 31:8–9 ಯೆರೆಮೀಯ 31:8–9ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು. ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
- Isaiah 43:2 ಯೆಶಾಯ 43:2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Zechariah 8:7 ಜೆಕರ್ಯ 8:7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು.
- Jeremiah 30:10–11 ಯೆರೆಮೀಯ 30:10–11ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು. ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.