Isaiah · chapter 44 · verse 1
Isaiah 44:1 in Kannada
ಈಗಲಾದರೋ ನನ್ನ ಸೇವಕನಾದ ಓ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು.
Eegalaadaro nanna sevakanaada o yaakobe, naanu aarisikonda israayele, kelu.
Isaiah 44:1 in English
- King James Version (KJV)
- Yet now hear, O Jacob my servant; and Israel, whom I have chosen:
- World English Bible (WEB)
- Yet listen now, Jacob my servant, and Israel, whom I have chosen.
- American Standard Version (ASV)
- Yet now hear, O Jacob my servant, and Israel, who I have chosen:
- Bible in Basic English (BBE)
- And now, give ear, O Jacob my servant, and Israel whom I have taken for myself:
- Darby Translation (DBY)
- And now hear, Jacob, my servant, and Israel, whom I have chosen:
- Webster's Bible (WBS)
- Yet now hear, O Jacob my servant; and Israel, whom I have chosen:
- Young's Literal Translation (YLT)
- And now, hear, O Jacob, My servant, And Israel, whom I have fixed on:
Read in context
- 1ಈಗಲಾದರೋ ನನ್ನ ಸೇವಕನಾದ ಓ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು.
- 2ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
- 3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
Cross references
- Isaiah 41:8 ಯೆಶಾಯ 41:8ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
- Jeremiah 30:10 ಯೆರೆಮೀಯ 30:10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
- Romans 11:5–6 ರೋಮಾಪುರದವರಿಗೆ 11:5–6ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- Psalm 105:6 ಕೀರ್ತನೆಗಳು 105:6ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
- Hebrews 3:7–8 ಇಬ್ರಿಯರಿಗೆ 3:7–8ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
- Jeremiah 46:27–28 ಯೆರೆಮೀಯ 46:27–28ಆದರೆ ನೀನು, ಓ ನನ್ನ ಸೇವಕನಾದ ಯಾಕೋಬನೇ, ನೀನು ಭಯ ಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶ ದಿಂದಲೂ ರಕ್ಷಿಸುವೆನು; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಾಗಿಯೂ ಸುಖವಾಗಿಯೂ ಇರುವನು; ಅವನನ್ನು ಭಯಪಡಿಸುವದಕ್ಕೆ ಯಾರೂ ಇರುವದಿಲ್ಲ.ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ. ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
- Jeremiah 4:7 ಯೆರೆಮೀಯ 4:7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Psalm 81:11–13 ಕೀರ್ತನೆಗಳು 81:11–13ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ. ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು. ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,
- Psalm 105:42–43 ಕೀರ್ತನೆಗಳು 105:42–43ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು. ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು,
- Isaiah 48:16–18 ಯೆಶಾಯ 48:16–18ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ. ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ. ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
- Isaiah 43:1 ಯೆಶಾಯ 43:1ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.