Isaiah · chapter 44 · verse 21
Isaiah 44:21 in Kannada
ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
O yaakobe, israayele, ee vishaya galannu jnyaapakadallittuko. Neenu nanna sevaka naagiddee; naanu ninnannu nirmisidenu. Neenu nanna sevakanu; o israayele, naanu ninnannu maretubidenu.
Isaiah 44:21 in English
- King James Version (KJV)
- Remember these, O Jacob and Israel; for thou [art] my servant: I have formed thee; thou [art] my servant: O Israel, thou shalt not be forgotten of me.
- World English Bible (WEB)
- Remember these things, Jacob and Israel, for you are my servant. I have formed you. You are my servant. Israel, you will not be forgotten by me.
- American Standard Version (ASV)
- Remember these things, O Jacob, and Israel; for thou art my servant: I have formed thee; thou art my servant: O Israel, thou shalt not be forgotten of me.
- Bible in Basic English (BBE)
- Keep these things in mind, O Jacob; and you Israel, for you are my servant: I have made you; you are my servant; O Israel, I will not let you go out of my memory.
- Darby Translation (DBY)
- Remember these things, O Jacob, and Israel, for thou art my servant; I have formed thee: thou art my servant, Israel; thou shalt not be forgotten of me.
- Webster's Bible (WBS)
- Remember these, O Jacob and Israel; for thou [art] my servant: I have formed thee; thou [art] my servant: O Israel, thou shalt not be forgotten by me.
- Young's Literal Translation (YLT)
- Remember these, O Jacob, and Israel, For My servant thou [art], I formed thee, a servant to Me thou [art], O Israel, thou dost not forget Me.
Read in context
- 19ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
- 20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- 21ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
- 22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- 23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
Cross references
- Isaiah 44:1–2 ಯೆಶಾಯ 44:1–2ಈಗಲಾದರೋ ನನ್ನ ಸೇವಕನಾದ ಓ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು. ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
- Isaiah 49:15–16 ಯೆಶಾಯ 49:15–16ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ. ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
- Isaiah 43:15 ಯೆಶಾಯ 43:15ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.
- Deuteronomy 4:23 ಧರ್ಮೋಪದೇಶಕಾಂಡ 4:23ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
- Isaiah 43:1 ಯೆಶಾಯ 43:1ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
- Isaiah 46:8–9 ಯೆಶಾಯ 46:8–9ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ; ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.
- Zechariah 10:9 ಜೆಕರ್ಯ 10:9ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
- Deuteronomy 32:18 ಧರ್ಮೋಪದೇಶಕಾಂಡ 32:18ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
- Deuteronomy 31:19–21 ಧರ್ಮೋಪದೇಶಕಾಂಡ 31:19–21ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು. ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು. ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.
- Romans 11:28–29 ರೋಮಾಪುರದವರಿಗೆ 11:28–29ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ. ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
- Isaiah 43:7 ಯೆಶಾಯ 43:7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
- Isaiah 41:8–9 ಯೆಶಾಯ 41:8–9ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ; ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.