Isaiah · chapter 44 · verse 22
Isaiah 44:22 in Kannada
ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
Naanu ninna drohagalannu gaadhavaada meghadante alisibittiddene; ninna paapagalannu modadante haarisiddene; nanna kadege tirigiko, naanu ninnannu vimochisiddene.
Isaiah 44:22 in English
- King James Version (KJV)
- I have blotted out, as a thick cloud, thy transgressions, and, as a cloud, thy sins: return unto me; for I have redeemed thee.
- World English Bible (WEB)
- I have blotted out, as a thick cloud, your transgressions, and, as a cloud, your sins. Return to me, for I have redeemed you.
- American Standard Version (ASV)
- I have blotted out, as a thick cloud, thy transgressions, and, as a cloud, thy sins: return unto me; for I have redeemed thee.
- Bible in Basic English (BBE)
- I have put your evil doings out of my mind like a thick cloud, and your sins like a mist: come back to me; for I have taken up your cause.
- Darby Translation (DBY)
- I have blotted out, as a thick cloud, thy transgressions, and, as a cloud, thy sins: return unto me; for I have redeemed thee.
- Webster's Bible (WBS)
- I have blotted out, as a thick cloud, thy transgressions, and as a cloud, thy sins: return to me; for I have redeemed thee.
- Young's Literal Translation (YLT)
- I have blotted out, as [by] a thick cloud, Thy transgressions, And as [by] a cloud thy sins, Return unto Me, for I have redeemed thee.
Read in context
- 20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- 21ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
- 22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- 23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- 24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
Cross references
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- 1 Corinthians 6:20 1 ಕೊರಿಂಥದವರಿಗೆ 6:20ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Acts 3:18–19 ಅಪೊಸ್ತಲರ ಕೃತ್ಯಗಳು 3:18–19ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು. ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- Isaiah 43:1 ಯೆಶಾಯ 43:1ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Psalm 103:12 ಕೀರ್ತನೆಗಳು 103:12ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Titus 2:12–14 ತೀತನಿಗೆ 2:12–14ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ. ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Jeremiah 33:8 ಯೆರೆಮೀಯ 33:8ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
- Psalm 51:1 ಕೀರ್ತನೆಗಳು 51:1ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
- Isaiah 48:20 ಯೆಶಾಯ 48:20ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
- Psalm 51:9 ಕೀರ್ತನೆಗಳು 51:9ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.