Isaiah · chapter 44 · verse 25
Isaiah 44:25 in Kannada
ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
Sullugaarara gurutugalannu nirarthakamaaduvavanoo kani helu vavarannu huchcharannaagi maaduvavanoo jnyaanigalannu hindakke talli avara tiluvalikeyannu buddiheena vaaga maaduvavanoo
Isaiah 44:25 in English
- King James Version (KJV)
- That frustrateth the tokens of the liars, and maketh diviners mad; that turneth wise [men] backward, and maketh their knowledge foolish;
- World English Bible (WEB)
- who frustrates the signs of the liars, and makes diviners mad; who turns wise men backward, and makes their knowledge foolish;
- American Standard Version (ASV)
- that frustrateth the signs of the liars, and maketh diviners mad; that turneth wise men backward, and maketh their knowledge foolish;
- Bible in Basic English (BBE)
- Who makes the signs of those who give word of the future come to nothing, so that those who have knowledge of secret arts go off their heads; turning the wise men back, and making their knowledge foolish:
- Darby Translation (DBY)
- — he that frustrateth the tokens of the liars, and maketh diviners mad; that turneth wise men backward, and maketh their knowledge foolish;
- Webster's Bible (WBS)
- That frustrateth the tokens of the liars, and maketh diviners mad; that turneth wise [men] backward, and maketh their knowledge foolish;
- Young's Literal Translation (YLT)
- Making void the tokens of devisers, And diviners it maketh mad, Turning the wise backward, And their knowledge it maketh foolish.
Read in context
- 23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- 24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
- 25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
- 26ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
- 27ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
Cross references
- Psalm 33:10 ಕೀರ್ತನೆಗಳು 33:10ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
- Job 5:12–14 ಯೋಬನು 5:12–14ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು. ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
- 2 Samuel 15:31 2 ಸಮುವೇಲನು 15:31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
- Jeremiah 50:36 ಯೆರೆಮೀಯ 50:36ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
- Jeremiah 51:57 ಯೆರೆಮೀಯ 51:57ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
- 1 Corinthians 1:20–27 1 ಕೊರಿಂಥದವರಿಗೆ 1:20–27ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ? ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು. ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ. ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ. ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
- Isaiah 47:12–14 ಯೆಶಾಯ 47:12–14ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ. ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
- Isaiah 29:14 ಯೆಶಾಯ 29:14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
- 1 Corinthians 3:19–20 1 ಕೊರಿಂಥದವರಿಗೆ 3:19–20ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
- Jeremiah 27:9–10 ಯೆರೆಮೀಯ 27:9–10ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ. ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
- Daniel 5:6–8 ದಾನಿಯೇಲನು 5:6–8ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು. ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
- Isaiah 19:11–14 ಯೆಶಾಯ 19:11–14ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ? ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ. ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ. ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.