Isaiah · chapter 44 · verse 28
Isaiah 44:28 in Kannada
ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
Koreshana vishaya vaagi--avanu nanna kurubanu; nanna ichchheyannellaa pooraisuvavanoo yeroosalemige--neenu kattalpa duvi; devaalayakke--ninna astivaaravu haakalpadu vadendu annuvavanu naane.
Isaiah 44:28 in English
- King James Version (KJV)
- That saith of Cyrus, [He is] my shepherd, and shall perform all my pleasure: even saying to Jerusalem, Thou shalt be built; and to the temple, Thy foundation shall be laid.
- World English Bible (WEB)
- who says of Cyrus, ‘He is my shepherd, and shall perform all my pleasure,’ even saying of Jerusalem, ‘She will be built;’ and of the temple, ‘Your foundation will be laid.’”
- American Standard Version (ASV)
- That saith of Cyrus, [He is] my shepherd, and shall perform all my pleasure, even saying of Jerusalem, She shall be built; and of the temple, Thy foundation shall be laid.
- Bible in Basic English (BBE)
- Who says of Cyrus, He will take care of my sheep, and will do all my pleasure: who says of Jerusalem, I will give the word for your building; and of the Temple, Your bases will be put in place.
- Darby Translation (DBY)
- that saith of Cyrus, [He is] my shepherd, and he shall perform all my pleasure; even saying to Jerusalem, Thou shalt be built; and to the temple, Thy foundation shall be laid.
- Webster's Bible (WBS)
- That saith of Cyrus, [He is] my shepherd, and [he] shall perform all my pleasure: even saying to Jerusalem, Thou shalt be built; and to the temple, Thy foundation shall be laid.
- Young's Literal Translation (YLT)
- Who is saying of Cyrus, My shepherd, And all my delight He doth perfect, So as to say of Jerusalem, Thou art built, And of the temple, Thou art founded.
Read in context
- 26ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
- 27ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
- 28ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
Cross references
- Isaiah 45:1 ಯೆಶಾಯ 45:1ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
- Daniel 10:1 ದಾನಿಯೇಲನು 10:1ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
- Ezra 6:3–18 ಎಜ್ರನು 6:3–18ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ; ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ. ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ. ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರ್ರಿ. ದೇವರ ಆಲಯದ ಗೊಡವೆಯನ್ನು ನೀವು ಬಿಡಿರಿ. ಯೆಹೂದ್ಯರ ಅಧಿಪತಿಯೂ ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ. ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ. ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ. ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ. ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು. ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು. ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು. ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು. ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು. ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು. ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
- Isaiah 45:13 ಯೆಶಾಯ 45:13ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 46:11 ಯೆಶಾಯ 46:11ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Isaiah 63:11 ಯೆಶಾಯ 63:11ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
- Psalm 78:71–72 ಕೀರ್ತನೆಗಳು 78:71–72ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- Isaiah 48:14–15 ಯೆಶಾಯ 48:14–15ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು. ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
- Isaiah 45:3 ಯೆಶಾಯ 45:3ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
- Isaiah 42:15 ಯೆಶಾಯ 42:15ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.