Isaiah · chapter 44 · verse 7
Isaiah 44:7 in Kannada
ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.
Naanu puraatana kaala davarannu ittandininda nanna haage karedu, tilisi adannu sariyaagi nanagoskara siddhamaadidavanu yaaru? Munde baruvavugalannu barabekaadaddannu avaru avarige tilisali.
Isaiah 44:7 in English
- King James Version (KJV)
- And who, as I, shall call, and shall declare it, and set it in order for me, since I appointed the ancient people? and the things that are coming, and shall come, let them shew unto them.
- World English Bible (WEB)
- Who is like me? Who will call, and will declare it, and set it in order for me, since I established the ancient people? Let them declare the things that are coming, and that will happen.
- American Standard Version (ASV)
- And who, as I, shall call, and shall declare it, and set it in order for me, since I established the ancient people? and the things that are coming, and that shall come to pass, let them declare.
- Bible in Basic English (BBE)
- If there is one like me, let him come forward and say it, let him make it clear and put it in order before me: who has made clear in the past the things to come? let him make clear the future to me.
- Darby Translation (DBY)
- And who, as I, shall call, and shall declare it, and set it in order for me, since I appointed the ancient people? And the coming things, and those that shall happen, let them declare unto them.
- Webster's Bible (WBS)
- And who, as I, shall call, and shall declare it, and set it in order for me, since I appointed the ancient people? and the things that are coming, and shall come, let them show to them.
- Young's Literal Translation (YLT)
- And who as I, doth call and declare it, And arrange it for Me, Since My placing the people of antiquity, And things that are coming, And those that do come, declare they to them?
Read in context
- 5ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
- 6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- 7ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.
- 8ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
- 9ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
Cross references
- Isaiah 41:26 ಯೆಶಾಯ 41:26ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
- Isaiah 46:9–10 ಯೆಶಾಯ 46:9–10ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ. ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Isaiah 41:22 ಯೆಶಾಯ 41:22ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
- Isaiah 45:21 ಯೆಶಾಯ 45:21ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
- Isaiah 43:9 ಯೆಶಾಯ 43:9ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Isaiah 43:12 ಯೆಶಾಯ 43:12ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.
- Genesis 17:7–8 ಆದಿಕಾಂಡ 17:7–8ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Deuteronomy 32:8 ಧರ್ಮೋಪದೇಶಕಾಂಡ 32:8ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
- Isaiah 48:3–8 ಯೆಶಾಯ 48:3–8ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು. ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ. ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು. ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ. ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ಈ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ. ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
- Isaiah 41:4 ಯೆಶಾಯ 41:4ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.