Isaiah · chapter 46 · verse 1
Isaiah 46:1 in Kannada
ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
Bel(devateyu)boggide, nebo (devateyu) kuggide; avara vigrahagalu mrugagala mattu pashugala mele iddavu, neevu horuttiddavugalu bhaaravaada horeyaagiddavu. Aayaasavulla mrugagalige avu bhaaravaadavu.
Isaiah 46:1 in English
- King James Version (KJV)
- Bel boweth down, Nebo stoopeth, their idols were upon the beasts, and upon the cattle: your carriages [were] heavy loaden; [they are] a burden to the weary [beast].
- World English Bible (WEB)
- Bel bows down. Nebo stoops. Their idols are carried by animals, and on the livestock. The things that you carried around are heavy loads, a burden for the weary.
- American Standard Version (ASV)
- Bel boweth down, Nebo stoopeth; their idols are upon the beasts, and upon the cattle: the things that ye carried about are made a load, a burden to the weary [beast].
- Bible in Basic English (BBE)
- Bel is bent down, Nebo is falling; their images are on the beasts and on the cattle: the things which you took about have become a weight to the tired beast.
- Darby Translation (DBY)
- Bel is bowed down, Nebo bendeth; their idols are upon the beasts, and upon the cattle: the things ye carried are laid on, a burden to the weary [beast].
- Webster's Bible (WBS)
- Bel boweth down, Nebo stoopeth, their idols were upon the beasts, and upon the cattle: your loads [were] heavy; [they were] a burden to the weary [beast] .
- Young's Literal Translation (YLT)
- Bowed down hath Bel, stooping is Nebo, Their idols have been for the beast and for cattle, Your burdens are loaded, a burden to the weary.
Read in context
- 1ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
- 2ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.
- 3ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
Cross references
- Isaiah 21:9 ಯೆಶಾಯ 21:9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
- Jeremiah 51:44 ಯೆರೆಮೀಯ 51:44ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- Jeremiah 48:1–25 ಯೆರೆಮೀಯ 48:1–25ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು. ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು. ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು. ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು. ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ. ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ. ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು. ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು. ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ. ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ. ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ. ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು. ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ ಹಾಗೆಯೇ ಮೋವಾಬು ಕೇಮೋ ಷನ ವಿಷಯ ನಾಚಿಕೆಪಡುವದು. ನಾವು ಪರಾಕ್ರಮ ಶಾಲಿಗಳೂ ಯುದ್ಧಕ್ಕೆ ಬಲಿಷ್ಠರೂ ಎಂದು ನೀವು ಹೇಳುವದು ಹೇಗೆ? ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ. ಮೋವಾಬಿನ ಆಪತ್ತು ಬರುವದಕ್ಕೆ ಸವಿಾಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ. ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ. ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು. ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು. ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ. ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್ನ ಮೇಲೆಯೂ ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ ಕಿರ್ಯಾತಯಾಮಿನ ಮೇಲೆಯೂ ಬೇತ್ಗಾಮುಲಿನ ಮೇಲೆಯೂ ಬೇತ್ಮೆಯೋನಿನ ಮೇಲೆಯೂ ಕೆರೀಯೋತ್ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು. ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
- Jeremiah 51:52 ಯೆರೆಮೀಯ 51:52ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
- Isaiah 41:6–7 ಯೆಶಾಯ 41:6–7ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ. ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- Isaiah 2:20 ಯೆಶಾಯ 2:20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Jeremiah 10:5 ಯೆರೆಮೀಯ 10:5ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
- Jeremiah 51:47 ಯೆರೆಮೀಯ 51:47ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
- 1 Samuel 5:3 1 ಸಮುವೇಲನು 5:3ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.