Isaiah · chapter 46 · verse 6
Isaiah 46:6 in Kannada
ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
Cheeladinda chinnavannu suridu traasi nalli belliyannu toogi, akkasaaliganige kooli kottaaga, avanu adannu devarannaagi maadalu avaru adakke eragi pooje maaduvaru.
Isaiah 46:6 in English
- King James Version (KJV)
- They lavish gold out of the bag, and weigh silver in the balance, [and] hire a goldsmith; and he maketh it a god: they fall down, yea, they worship.
- World English Bible (WEB)
- Some pour out gold from the bag, and weigh silver in the balance. They hire a goldsmith, and he makes it a god. They fall down— yes, they worship.
- American Standard Version (ASV)
- Such as lavish gold out of the bag, and weigh silver in the balance, they hire a goldsmith, and he maketh it a god; they fall down, yea, they worship.
- Bible in Basic English (BBE)
- As for those who take gold out of a bag, and put silver in the scales, they give payment to a gold-worker, to make it into a god; they go down on their faces and give it worship.
- Darby Translation (DBY)
- — They lavish gold out of the bag, and weigh silver in the balance; they hire a goldsmith, and he maketh it a god: they fall down, yea, they worship.
- Webster's Bible (WBS)
- They lavish gold out of the bag, and weigh silver in the balance, [and] hire a goldsmith; and he maketh it a god: they fall down, yes, they worship.
- Young's Literal Translation (YLT)
- — They are pouring out gold from a bag, And silver on the beam they weigh, They hire a refiner, and he maketh it a god, They fall down, yea, they bow themselves.
Read in context
- 4ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
- 5ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ?
- 6ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
- 7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
- 8ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;
Cross references
- Acts 17:29 ಅಪೊಸ್ತಲರ ಕೃತ್ಯಗಳು 17:29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
- Jeremiah 10:14 ಯೆರೆಮೀಯ 10:14ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
- Isaiah 40:19–20 ಯೆಶಾಯ 40:19–20ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು. ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
- Isaiah 2:8 ಯೆಶಾಯ 2:8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
- Judges 17:3–4 ನ್ಯಾಯಸ್ಥಾಪಕರು 17:3–4ಅವನು ಆ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು. ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು.
- 1 Kings 12:28 1 ಅರಸುಗಳು 12:28ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
- Hosea 8:4–6 ಹೋಶೇಯ 8:4–6ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ? ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
- Isaiah 44:12–19 ಯೆಶಾಯ 44:12–19ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ. ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು. ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು. ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು; ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು; ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
- Jeremiah 10:3–4 ಯೆರೆಮೀಯ 10:3–4ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
- Jeremiah 10:9 ಯೆರೆಮೀಯ 10:9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
- Exodus 32:2–4 ವಿಮೋಚನಕಾಂಡ 32:2–4ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು. ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು. ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
- Habakkuk 2:18–20 ಹಬಕ್ಕೂಕ 2:18–20ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು? ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ. ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.