Isaiah · chapter 46 · verse 7
Isaiah 46:7 in Kannada
ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
Avaru adannu tamma hegalina mele hottukondu adara sthaladalli ilisi nillisuvaru. Adu adara sthaladinda jarugadu. Haudu, obbanu koogi kondaroo adu avanige uttarakodalaaradu illave avanannu kashtadinda rakshisalaaradu.
Isaiah 46:7 in English
- King James Version (KJV)
- They bear him upon the shoulder, they carry him, and set him in his place, and he standeth; from his place shall he not remove: yea, [one] shall cry unto him, yet can he not answer, nor save him out of his trouble.
- World English Bible (WEB)
- They bear it on their shoulder. They carry it, and set it in its place, and it stands there. It cannot move from its place. Yes, one may cry to it, yet it can not answer. It cannot save him out of his trouble.
- American Standard Version (ASV)
- They bear it upon the shoulder, they carry it, and set it in its place, and it standeth, from its place shall it not remove: yea, one may cry unto it, yet can it not answer, nor save him out of his trouble.
- Bible in Basic English (BBE)
- They put him on their backs, and take him up, and put him in his fixed place, from which he may not be moved; if a man gives a cry for help to him, he is unable to give an answer, or get him out of his trouble.
- Darby Translation (DBY)
- They bear him on the shoulder, they carry him, and set him in his place; there he standeth, he doth not remove from his place: yea, one crieth unto him, and he answereth not; he saveth him not out of his trouble.
- Webster's Bible (WBS)
- They bear him upon the shoulder, they carry him, and set him in his place, and he standeth; from his place shall he not remove: yes, [one] shall cry to him, yet he cannot answer, nor save him out of his trouble.
- Young's Literal Translation (YLT)
- They lift him up on the shoulder, They carry him, and cause him to rest in his place, And he standeth, from his place he moveth not, Yea, one crieth unto him, and he answereth not, From his adversity he saveth him not.
Read in context
- 5ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ?
- 6ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
- 7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
- 8ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;
- 9ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.
Cross references
- Isaiah 45:20 ಯೆಶಾಯ 45:20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
- Jeremiah 10:5 ಯೆರೆಮೀಯ 10:5ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
- 1 Samuel 5:3 1 ಸಮುವೇಲನು 5:3ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
- Isaiah 46:1 ಯೆಶಾಯ 46:1ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
- 1 Kings 18:40 1 ಅರಸುಗಳು 18:40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- Daniel 3:1 ದಾನಿಯೇಲನು 3:1ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
- Jonah 1:14–16 ಯೋನ 1:14–16ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು. ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು. ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
- Jeremiah 2:28 ಯೆರೆಮೀಯ 2:28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
- Judges 10:12–14 ನ್ಯಾಯಸ್ಥಾಪಕರು 10:12–14ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು. ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ. ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
- 1 Kings 18:26 1 ಅರಸುಗಳು 18:26ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
- Jonah 1:5 ಯೋನ 1:5ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
- Isaiah 37:38 ಯೆಶಾಯ 37:38ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.