Isaiah · chapter 47 · verse 3
Isaiah 47:3 in Kannada
ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
Ninna bettaletanavu muchchalpadade iddadarinda neenu naachikege eedaaguvi, naanu ninnannu manushyanante sandisade ninage muyyi teerisuvenu.
Isaiah 47:3 in English
- King James Version (KJV)
- Thy nakedness shall be uncovered, yea, thy shame shall be seen: I will take vengeance, and I will not meet [thee as] a man.
- World English Bible (WEB)
- Your nakedness will be uncovered. Yes, your shame will be seen. I will take vengeance, and will spare no one.”
- American Standard Version (ASV)
- Thy nakedness shall be uncovered, yea, thy shame shall be seen: I will take vengeance, and will spare no man.
- Bible in Basic English (BBE)
- The shame of your unclothed condition will be seen by all: I will give punishment without mercy,
- Darby Translation (DBY)
- thy nakedness shall be uncovered, yea, thy shame shall be seen. I will take vengeance, and I will meet none [to stay me]. ...
- Webster's Bible (WBS)
- Thy nakedness shall be uncovered, yes, thy shame shall be seen: I will take vengeance, and I will not meet [thee as] a man.
- Young's Literal Translation (YLT)
- Revealed is thy nakedness, yea, seen is thy reproach, Vengeance I take, and I meet not a man.
Read in context
- 1ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
- 2ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
- 3ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
- 4ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
- 5ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.
Cross references
- Nahum 3:5 ನಹೂಮ 3:5ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.
- Jeremiah 51:20–24 ಯೆರೆಮೀಯ 51:20–24ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ; ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ. ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
- Jeremiah 50:27–28 ಯೆರೆಮೀಯ 50:27–28ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು. ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!
- Revelation 16:19 ಪ್ರಕಟನೆ 16:19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- Isaiah 59:17–18 ಯೆಶಾಯ 59:17–18ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು. ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
- Jeremiah 51:4 ಯೆರೆಮೀಯ 51:4ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
- Jeremiah 51:56 ಯೆರೆಮೀಯ 51:56ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.
- Ezekiel 16:37 ಯೆಹೆಜ್ಕೇಲನು 16:37ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
- Revelation 18:5–8 ಪ್ರಕಟನೆ 18:5–8ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ. ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ. ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
- Psalm 94:1–2 ಕೀರ್ತನೆಗಳು 94:1–2ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ. ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Isaiah 63:4–6 ಯೆಶಾಯ 63:4–6ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು. ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು. ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.